20.4 C
Bangalore
Monday, December 9, 2019

ಭವಿಷ್ಯದ ಬಗ್ಗೆ ಸ್ಪಷ್ಟ ನಿರ್ಧಾರವಿಲ್ಲದೆ ತೂಗುಯ್ಯಾಲೆಯಲ್ಲಿ ತೂಗುತ್ತಿದೆ ಮಧುಗುಂಡಿ ಗ್ರಾಮಸ್ಥರ ಬದುಕು

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಬಣಕಲ್: ದುರಸ್ತಿ ಮಾಡಿದಷ್ಟೂ ಕುಸಿಯುತ್ತಿರುವ ಗುಡ್ಡಗಳು, ಮಳೆಗೆ ಕುಸಿದ ಸಾಲು ಸಾಲು ಮನೆಗಳು, ಪ್ರವಾಹಕ್ಕೆ ಕೊಚ್ಚಿ ಹೋಗಿ ಒಂದೆಡೆ ರಾಶಿ ಬಿದ್ದ ಕಾಫಿಗಿಡಗಳು… ಇದು ಮಧುಗುಂಡಿ ಗ್ರಾಮದ ಸದ್ಯದ ಚಿತ್ರಣ.

ಪ್ರವಾಹದ ತೀವ್ರತೆಗೆ ಮಧುಗುಂಡಿ ಗ್ರಾಮ ತತ್ತರಿಸಿದ್ದು, ಗ್ರಾಮಕ್ಕೆ ಹಿಂದಿರುಗಲು ಜನ ಹಿಂಜರಿಯುತ್ತಿದ್ದಾರೆ. ಹಲವು ದಿನಗಳ ಹಿಂದೆ ಬಿದರಹಳ್ಳಿಯ ನೆರೆ ಪರಿಹಾರ ಕೇಂದ್ರದಲ್ಲಿರುವ ಮಧುಗುಂಡಿಯ 40ಕ್ಕೂ ಹೆಚ್ಚು ಕುಟುಂಬಗಳು ಸರ್ಕಾರ ಪುನರ್ವಸತಿ ನಿರೀಕ್ಷೆಯಲ್ಲಿ ದಿನ ಕಳೆಯುತ್ತಿದ್ದಾರೆ.

ನೆರೆ ಪರಿಹಾರ ಕೇಂದ್ರದಲ್ಲಿರವ ಮಧುಗುಂಡಿ ಸಂತ್ರಸ್ತರು ಪರಿಹಾರದ ಅರ್ಜಿ ಸಲ್ಲಿಸಲು ದಾಖಲೆ ಹೊಂದಿಸಿ ಸರ್ಕಾರಿ ಕಚೇರಿಗೆ ಸುತ್ತಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ನೆರೆ ಪರಿಹಾರ ಕೇಂದ್ರದ ಸಂತ್ರಸ್ತರಿಗೆ 10 ಸಾವಿರ ರೂ.ಚೆಕ್ ವಿತರಿಸಲಾಗಿದ್ದು ತಮ್ಮ ಭಾಗದ ಬ್ಯಾಂಕ್​ಗಳಲ್ಲಿ ಹಣ ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಹೊಸ ಬದುಕು ಆರಂಭಿಸಬೇಕು: ಬಿದರಹಳ್ಳಿ ನೆರೆ ಪರಿಹಾರ ಕೇಂದ್ರಕ್ಕೆ ಬಂದ ಮಧುಗುಂಡಿಯ ಬಹುತೇಕ ಜನ ಮತ್ತೆ ಗ್ರಾಮಕ್ಕೆ ಹೋಗಿಲ್ಲ. ಮನೆ ಕುಸಿದು ವಸ್ತುಗಳೆಲ್ಲ ಕೊಚ್ಚಿ ಹೋದ ನಂತರ ಹಿಂದಿರುಗಲು ಮನಸ್ಸಾಗುತ್ತಿಲ್ಲ. ಅಲ್ಲಿ ಬಿದ್ದ ಮನೆ ನೋಡಿ ನಿಟ್ಟುಸಿರು ಬಿಡಬೇಕೆ ಹೊರತು ಮತ್ತೆ ಮನೆ ಕಟ್ಟಿ ನೆಲೆ ನಿಲ್ಲಲು ಸಾಧ್ಯವಿಲ್ಲ. ಮತ್ತೆ ಗುಡ್ಡ ಕುಸಿಯುವ ಆತಂಕದಲ್ಲಿ ಬದುಕ ಬೇಕು. ಸರ್ಕಾರ ಜಾಗ ನೀಡಿದರೆ ಅಲ್ಲಿ ಹೊಸ ಬದುಕು ಆರಂಭಿಸುವ ನಿರೀಕ್ಷೆಯಲ್ಲಿದ್ದಾರೆ ಗ್ರಾಮಸ್ಥರು.

ಮಣ್ಣು ತೆಗೆದಷ್ಟೂ ಕುಸಿಯುತ್ತಿರುವ ಗುಡ್ಡ: ಮಧುಗುಂಡಿಯ ಕಡಿದಾದ ರಸ್ತೆಗಳಲ್ಲಿ ಕುಸಿದ ಗುಡ್ಡದ ಮಣ್ಣನ್ನು ತೆರವುಗೊಳಿಸಿದರೂ ಮತ್ತೆ ಮತ್ತೆ ರಸ್ತೆಗೆ ಮಣ್ಣು ಜಾರುತ್ತಿದೆ. ಇದರಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವುದು ಸವಾಲಾಗಿದೆ. ಗ್ರಾಮದ ಸುಮಾರು 10 ಮನೆಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದೆ. ಗ್ರಾಮಸ್ಥರೆ ಮರದ ಕಂಬಗಳನ್ನು ಸೇತುವೆಗೆ ತಾಗಿಸಿ ಹರಸಾಹಸ ಪಟ್ಟು ಸೇತುವೆ ದಾಟಿ ಮನೆಗಳಿಗೆ ಹೋಗುತ್ತಿದ್ದಾರೆ. ಕೆಲವು ಜಾನುವಾರುಗಳನ್ನು ಗ್ರಾಮಸ್ಥರು ಕಂಬಗಳ ಮೂಲಕ ಹಳ್ಳ ದಾಟಿಸುತ್ತಿದ್ದಾರೆ.

ಡಿಸಿ, ಶಾಸಕರು ಪುನರ್ವಸತಿ ಭರವಸೆ ನೀಡಲಿ: ನೆರೆ ಪರಿಹಾರ ಕೇಂದ್ರಕ್ಕೆ ಬಂದು ಹಲವು ದಿನಗಳಾಗಿವೆ. ಬಾಡಿಗೆ ಮನೆಯಲ್ಲಿ ವಾಸಿಸಲು ತಿಂಗಳಿಗೆ 5 ಸಾವಿರ ರೂಪಾಯಿಯಂತೆ 10 ತಿಂಗಳು ಸರ್ಕಾರ ಬಾಡಿಗೆ ಹಣ ನೀಡುತ್ತದೆ. 10 ತಿಂಗಳ ಒಳಗೆ ಸರ್ಕಾರ ಮನೆ ಕಟ್ಟಲು ಜಾಗ ಮತ್ತು ಪರಿಹಾರ ನೀಡುವ ಭರವಸೆ ನೀಡಬೇಕು. ಆದರೆ ಯಾವ ಅಧಿಕಾರಿಗಳೂ ಸ್ಪಷ್ಟವಾಗಿ ಉತ್ತರಿಸುತ್ತಿಲ್ಲ. ಡಿಸಿ ಮತ್ತು ಶಾಸಕರು ನೆರೆ ಪರಿಹಾರ ಕೇಂದ್ರಕ್ಕೆ ಬಂದು ಪುನರ್ವಸತಿಗೆ ಜಾಗ ಮತ್ತು ಮನೆ ಕಟ್ಟಲು ಪರಿಹಾರ ನೀಡುವ ಭರವಸೆ ನೀಡಲಿ ಎಂಬುದು ಗ್ರಾಮಸ್ಥರ ಒತ್ತಾಯ.

ವಿದ್ಯಾರ್ಥಿಗಳಿಗೆ ಸುದೀರ್ಘ ರಜೆ: ಪ್ರವಾಹದಿಂದ ಬಿದರಹಳ್ಳಿಯ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಹಾರ ಕೇಂದ್ರ ಆರಂಭಿಸಿರುವುದರಿಂದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ಪರಿಹಾರ ಕೇಂದ್ರಕ್ಕೆ ಬಂದ ದಿನ ಶಾಲೆ ವಿದ್ಯಾರ್ಥಿಗಳು ಬಕ್ರೀದ್ ಪ್ರಯುಕ್ತ ಮನೆಗೆ ಹೋಗಿದ್ದರು. ಆ ನಂತರ ನೆರೆ ಸಂತ್ರಸ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಕೆಲವು ದಿನಗಳ ಮಟ್ಟಿಗೆ 6 ಮತ್ತು 7ನೇ ತರಗತಿಗಳಿಗೆ ರಜೆ ನೀಡಲಾಗಿತ್ತು. ಆದರೆ ಸರ್ಕಾರ ಪುನರ್ವಸತಿ ಕಲ್ಪಿಸುವವರೆಗೆ ನೆರೆಪರಿಹಾರ ಕೇಂದ್ರದಲ್ಲಿ ಇರಬೇಕಾದ ಅನಿವಾರ್ಯತೆ ಇರುವುದರಿಂದ 6 ಮತ್ತ 7ನೇ ತರಗತಿಗಳ ವಿದ್ಯಾರ್ಥಿಗಳ ತರಗತಿ ನಡೆಸುವುದು ಹೇಗೆ ಎಂಬುದು ಪ್ರಶ್ನೆಯಾಗಿದೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...