More

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದ; ಮಹಾನಗರ ಪಾಲಿಕೆಯಿಂದ ಐತಿಹಾಸಿಕ ನಿರ್ಣಯ

    ಹುಬ್ಬಳ್ಳಿ: ನಗರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಸಾರ್ವಜನಿಕವಾಗಿ 3 ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ತೀರ್ಮಾನಿಸಲಾಗಿದೆ.

    ಸೋಮವಾರ ಸಂಜೆ 5 ಗಂಟೆಗೆ ಸದನ ಸಮಿತಿಯು ಮೇಯರ್ ಈರೇಶ ಅಂಚಟಗೇರಿ ಅವರಿಗೆ ವರದಿ ಸಲ್ಲಿಸಿದ ಬಳಿಕ, ಪ್ರವಾಸಿ ಮಂದಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು.

    ಸಭೆಯ ಬಳಿಕ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ಪ್ರತಿಷ್ಠಾಪನೆಗೆ ಅವಕಾಶ ಕೋರಿ 6 ಸಂಘಟನೆಗಳು ಮನವಿ ಸಲ್ಲಿಸಿವೆ. ಒಂದು ಸಂಘಟನೆಗೆ ಅವಕಾಶ ನೀಡಲಾಗುವುದು. ಆ ಸಂಘಟನೆ ಯಾವುದು ಎಂಬುದು ನಾಳೆ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

    ಸಭೆಯಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಎಡಿಜಿಪಿ ಅಲೋಕ್​ಕುಮಾರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೋಲಿಸ್ ಆಯುಕ್ತ ಲಾಭೂರಾಮ, ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಇತರರು ಇದ್ದರು.

    ಸಂತೋಷ ಚವ್ಹಾಣ ಅಧ್ಯಕ್ಷತೆಯ ಸದನ ಸಮಿತಿಯು ಪೂರ್ವ ನಿಗದಿಯಂತೆ ಸೋಮವಾರ ಬೆಳಗ್ಗೆ 11 ಗಂಟೆಗೆ ವರದಿ ಸಲ್ಲಿಸಬೇಕಿತ್ತು. ಆದರೆ ಏಕಾಏಕಿ ಇಂದು ಬೆಳಗ್ಗೆ 11 ಗಂಟೆಯಿಂದ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಆರಂಭಿಸಿತ್ತು. ಇಂದು ಒಂದೇ ದಿನ 10ಕ್ಕೂ ಹೆಚ್ಚು ಜನ, ಸಂಘಟನೆಗಳು ಪರ- ವಿರೋಧವಾಗಿ ಮನವಿ ಸಲ್ಲಿಸಿದ್ದವು.

    ಮಳೆ ಹಾನಿ ಪರಿಶೀಲನೆಗೆ ಹೋಗಿ ಹೊಳೆ ನಡುವೆ ಸಿಲುಕಿದ ಅಧಿಕಾರಿಗಳು

    ತಿಂಡಿ ವಿಷಯಕ್ಕೆ ಜಗಳ: ಹೆತ್ತ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳ ಹತ್ಯೆಗೈದ ಪಾಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts