

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ನೀಡದೇ ಇರುವುದಕ್ಕೆ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀನಾಯವಾಗಿ ಸೋಲು ಕಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.
ಜಗದೀಶ್ ಶೆಟ್ಟರ್ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಗೆಲುವಿನ ಉಸ್ತುವಾರಿ ಹೊತ್ತಿದ್ದ ರಜತ್ ಉಳ್ಳಾಗಡ್ಡಿ ಮಠ ಶೆಟ್ಟರ್ ಸೋಲಿನ ಬಳಿಕ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆಯೂ ನಡೆದಿದೆ. ಜಗದೀಶ್ ಶೆಟ್ಟರ್ ಸತತ ಆರು ಬಾರಿ ಬಿಜೆಪಿಯಿಂದ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಮಾತ್ರ ಮತದಾರರ ಶೆಟ್ಟರ್ 'ಕೈ' ಬಿಟ್ಟಿದ್ದಾರೆ.
ಇದನ್ನೂ ಓದಿ: ಇದು ಸಿದ್ಧಾಂತದ ಸೋಲಲ್ಲ, ವೈಯುಕ್ತಿಕ ಸೋಲು: ಸಿ.ಟಿ.ರವಿ
ಜಗದೀಶ್ ಶೆಟ್ಟರ್ 1994ರಿಂದಲೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾ ಬಂದಿದ್ದರು. ಶಾಸಕ, ಮಂತ್ರಿ, ಮುಖ್ಯಮಂತ್ರಿ ಹುದ್ದೇಗೇರಿದ್ದ ಶೆಟ್ಟರ್ಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಇದರಿಂದ ಬೇಸತ್ತು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು.