21.7 C
Bengaluru
Tuesday, January 21, 2020

ಪ್ರವಾಸೋದ್ಯಮದಿಂದ ಸರ್ಕಾರದ ಆದಾಯ ಹೆಚ್ಚಳ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಹುಬ್ಬಳ್ಳಿ: ನಗರದಲ್ಲಿ ಆರಂಭಗೊಂಡಿರುವ ಇಂದಿರಾ ಕ್ಯಾಂಟೀನ್​ನಲ್ಲಿ ಬೆಳಗ್ಗೆಯ ಉಪಾಹಾರ ಹಾಗೂ ಮಧ್ಯಾಹ್ನದ ಊಟಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾತ್ರಿ ಭೋಜನ ಸವಿಯಲು ಜನರ ನಿರಾಸಕ್ತಿ ಕಂಡು ಬಂದಿದೆ.

ಬಹು ದಿನಗಳ ವಿಳಂಬದ ಬಳಿಕ ಸೆ. 11ರಿಂದ ನಗರದ ಪಿ.ಬಿ. ರಸ್ತೆಯಲ್ಲಿರುವ ಪಾಲಿಕೆ ವಲಯ ಕಚೇರಿ ಬಳಿ, ಎಸ್. ಎಂ. ಕೃಷ್ಣ ನಗರ ಹಾಗೂ ಸೋನಿಯಾಗಾಂಧಿ ನಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿವೆ. ಪ್ರತಿ ಕ್ಯಾಂಟೀನ್​ನಲ್ಲಿ ಸರಾಸರಿಯಾಗಿ ನಿತ್ಯ ಬೆಳಗ್ಗೆ 450ರಿಂದ 500 ಜನ ಉಪಾಹಾರ ಸೇವಿಸುತ್ತಿದ್ದಾರೆ. ಸುಮಾರು 300-350 ಜನ ಮಧ್ಯಾಹ್ನದ ಊಟ ಮಾಡುತ್ತಿದ್ದಾರೆ. ರಾತ್ರಿ ಭೋಜನಕ್ಕೆ 100-150 ಜನ ಮಾತ್ರ ಇರುತ್ತಿದ್ದಾರೆ. ಪ್ರತಿ ಕ್ಯಾಂಟೀನ್​ನಲ್ಲಿ ನಿತ್ಯ ತಲಾ 500 ಜನರಿಗೆ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಭೋಜನ ಸಿದ್ಧಪಡಿಸಲಾಗುತ್ತಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ಭೋಜನ ಸಮಯ ರಾತ್ರಿ 8ಕ್ಕೆ ಕೊನೆಗೊಳ್ಳುತ್ತದೆ. ಹುಬ್ಬಳ್ಳಿಯ ಜನರಿಗೆ ಅಷ್ಟು ಬೇಗ ಊಟ ಮಾಡಿ ರೂಢಿ ಇಲ್ಲ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕಾರ್ವಿುಕರು, ಕೆಲಸಗಾರರು ರಾತ್ರಿ ವೇಳೆಯೂ ದುಡಿದಿದ್ದಾರೆ ಹಾಗೂ ಅಲ್ಲಿಯೇ ಪ್ರಸಾದ ಸ್ವೀಕರಿಸಿದ್ದಾರೆ. ಈ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ರಾತ್ರಿ ಭೋಜನಕ್ಕೆ ಜನರ ಹಾಜರಾತಿ ಕಡಿಮೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಧಾರವಾಡದ ಮಯೂರ ಆದಿತ್ಯ ರೆಸಾರ್ಟ್ ಜಿಲ್ಲೆಯ ಎಲ್ಲ ಇಂದಿರಾ ಕ್ಯಾಂಟೀನ್​ಗಳಿಗೆ 3 ವರ್ಷದ ಅವಧಿಗೆ ಆಹಾರ ಪೂರೈಕೆಯ ಟೆಂಡರ್ ಪಡೆದಿದೆ. ಕ್ಯಾಂಟೀನ್​ನಲ್ಲಿ 5 ರೂ.ಗೆ ಬೆಳಗಿನ ಉಪಾಹಾರ ಹಾಗೂ 10 ರೂ.ಗೆ ಊಟ ನೀಡಲಾಗುತ್ತದೆ. ವಾರದ ಏಳು ದಿನವೂ ಮೆನು ಬದಲಾಗುತ್ತದೆ. ‘ನಿತ್ಯ ತಲಾ 500 ಜನರಿಗೆ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಭೋಜನ ಸಿದ್ಧಪಡಿಸಲೇ ಬೇಕು. ಕಡಿಮೆ ಮಾಡುವಂತಿಲ್ಲ. ಬೆಂಗೇರಿಯಲ್ಲಿ ಮಾಸ್ಟರ್ ಕಿಚನ್ ಸಿದ್ಧಗೊಂಡಿದ್ದು, ಅಲ್ಲಿಂದಲೇ ಆಹಾರ ತಯಾರಿಸಿ ಇಂದಿರಾ ಕ್ಯಾಂಟೀನ್​ಗೆ ರವಾನಿಸಲಾಗುತ್ತಿದೆ. ಉಳಿದೆಡೆ ತ್ವರಿತವಾಗಿ ಕ್ಯಾಂಟೀನ್ ಆರಂಭಗೊಂಡರೆ ನಮಗೆ ಅನುಕೂಲವಾಗಲಿದೆ’ ಎಂದು ಮಯೂರ ಆದಿತ್ಯ ರೆಸಾರ್ಟ್​ನ ಸಿಒಒ ಹೇಮಲ ದೇಸಾಯಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

‘ಇಂದಿರಾ ಕ್ಯಾಂಟೀನ್​ನಿಂದ ಬಡ, ಕಾರ್ವಿುಕ ವರ್ಗದವರಿಗೆ ಅನುಕೂಲವಾಗಿದೆ. ಆಹಾರದ ಗುಣಮಟ್ಟ ಹಾಗೂ ಪ್ರಮಾಣದ ಬಗ್ಗೆ ಯಾರಿಂದಲೂ ತಕರಾರು ಇಲ್ಲ. ಖುದ್ದು ಭೇಟಿ ಪರಿಶೀಲಿಸಿದ್ದೇವೆ’ ಎಂದು ಪಾಲಿಕೆ ವಲಯ ಕಚೇರಿ (11) ಸಹಾಯಕ ಆಯುಕ್ತ ಬಸವರಾಜ ಲಮಾಣಿ ತಿಳಿಸಿದ್ದಾರೆ. ಹು-ಧಾ ಅವಳಿ ನಗರದಲ್ಲಿ ಸದ್ಯ 6 ಕಡೆ ಇಂದಿರಾ ಕ್ಯಾಂಟೀನ್ ಸಿದ್ಧವಾಗಿದೆ. ಅವು ಇನ್ನಷ್ಟೇ ಕಾರ್ಯಾರಂಭ ಮಾಡಬೇಕು. ಇನ್ನುಳಿದ ಮೂರು (ಹುಬ್ಬಳ್ಳಿಯಲ್ಲಿ 1 ಹಾಗೂ ಧಾರವಾಡದಲ್ಲಿ 2) ಕಡೆ ಜಾಗದ ಸಮಸ್ಯೆ ಬಗೆಹರಿಯಬೇಕಿದೆ. ಧಾರವಾಡದಲ್ಲಿ ಒಂದು ಮಾಸ್ಟರ್ ಕಿಚನ್ ತಯಾರಾಗಿದೆ.

 

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...