More

    ಹುಬ್ಬಳ್ಳಿ ಇನ್ವೆಸ್ಟ್ ಕರ್ನಾಟಕ ಹೂಡಿಕೆದಾರರ ಸಮಾವೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ

    ಹುಬ್ಬಳ್ಳಿ: ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಹೂಡಿಕೆದಾರರ ಸಮಾವೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

    ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸದಾನಂದಗೌಡ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಜಗದೀಶ ಶೆಟ್ಟರ್​, ಸುರೇಶ ಅಂಗಡಿ, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ್, ಅಮೃತ ದೇಸಾಯಿ, ಶಂಕರ ಪಾಟೀಲ ಮುನೇನಕೊಪ್ಪ, ಸಂಸದ ಭಗವಂತ ಖೂಬಾ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ವಿಆರ್​ಎಲ್​ ಸಮೂಹ ಸಂಸ್ಥೆಗಳ ಸಿಎಂಡಿ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಭಾಗಿಯಾಗಿದ್ದರು.

    ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯೋಗಾವಕಾಶ ಸೃಷ್ಠಿಸುವ ಹಿನ್ನೆಲೆಯಲ್ಲಿ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ. 700ಕ್ಕೂ ಹೆಚ್ಚು ಹೂಡಿಕೆದಾರರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

    ಹೂಡಿಕೆದಾರರ ಸಮಾವೇಶದಲ್ಲಿ ಸಚಿವ ಜಗದೀಶ ಶೆಟ್ಟರ್​, ಈ ಸಮಾವೇಶ ಇತಿಹಾಸ ನಿರ್ಮಾಣ ಮಾಡುವಂತಹದ್ದು. ಇಂತಹ ಹೂಡಿಕೆ ಸಮಾವೇಶಗಳು ಬೆಂಗಳೂರಿಗೆ ಮಾತ್ರ ಸೀಮಿತ ಆಗಿದ್ದವು. ಕೈಗಾರಿಕಾ ಇಲಾಖೆಯ ಜವಾಬ್ದಾರಿ ಸಿಕ್ಕಮೇಲೆ ಟೈರ್ 2 ಸಿಟಿಗೆ ಅನುಕೂಲ ಮಾಡುವ ಆಶಯ ನನಗಿತ್ತು ಆದ್ದರಿಂದ ಸಮಾವೇಶ ಇಲ್ಲಿಗೆ ಬಂದಿದೆ ಎಂದರು.

    ಕಳೆದ ತಿಂಗಳು ದಾವುಸ್​ನಲ್ಲಿ ನಡೆದ ಸಭೆಯಲ್ಲಿ ಕೈಗಾರಿಕೆ ಸ್ಥಾಪನೆ ಬಗ್ಗೆ ಸಾಕಷ್ಟು ಚರ್ಚೆ ನಡೆದಿವೆ. ಕೈಗಾರಿಕೆ ಸ್ಥಾಪನೆಗಳ ದೃಷ್ಟಿಯಿಂದ ಕೆಲ ಕಾನೂನು ತೊಡಕುಗಳನ್ನು ಈಗಾಗಲೇ ಸರಳೀಕರಣಗೊಳಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಾಕಷ್ಟು ಅನುಕೂಲ ಕಲ್ಪಿಸಿಕೊಟ್ಟಿದ್ದಾರೆ ಎಂದರು.

    ಕರ್ನಾಟಕ ರಾಜ್ಯ ಮೊದಲಿಂದಲೂ ಕೈಗಾರಿಕಾ ಸ್ನೇಹಿ ಪ್ರದೇಶವಾಗಿದೆ. ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆಗೆ ಬೇಕಾದ ಎಲ್ಲ ಸೌಕರ್ಯಗಳೂ ಇವೆ. ವಿಆರ್​ಎಲ್​ ಹುಬ್ಬಳ್ಳಿ ಮೂಲದ ಕಂಪನಿ. ಇದು ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಿದೆ. ಇದು ಹೆಮ್ಮೆ ಅಲ್ಲವೇ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ಈಗಾಗಲೇ 30-40ಹೂಡಿಕೆದಾರರು ಒಡಂಬಡಿಕೆ ಮಾಡಿಕೊಂಡಿದ್ದಾರೆ. ಅಂದಾಜು 20 ಸಾವಿರ ಕೋಟಿ ರೂ. ಹೂಡಿಕೆ ಇಂದೇ ಆಗಲಿದೆ. ಆದೋನಿ, ಟಾಟಾ ಸೇರಿದಂತೆ ಅನೇಕ ಬೃಹತ್ ಉದ್ದಿಮೆದಾರರು ಮುಂಬರುವ ದಿನದಲ್ಲಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ರಾಜ್ಯ, ಕೇಂದ್ರದಲ್ಲಿ ಒಂದೇ ಸರ್ಕಾರ ಇರುವುದರಿಂದ ಅಭಿವೃದ್ಧಿ ಕಾರ್ಯ ಸಾಧ್ಯ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts