More

    ಟಾಪ್ ೫ರಲ್ಲಿ ಹುಬ್ಬಳ್ಳಿ ಏರ್ ಪೋರ್ಟ್

    ಹುಬ್ಬಳ್ಳಿ: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಂಗೊಳಿಸುತ್ತಿರುವ ಹುಬ್ಬಳ್ಳಿ ವಿಮಾನ ನಿಲ್ದಾಣವು ಇದೀಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದ ಟಾಪ್ 5ರಲ್ಲಿ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದೆ.

    ಇತ್ತೀಚೆಗಷ್ಟೇ ಸುಮಾರು 320 ಕೋಟಿ ರೂ. ವೆಚ್ಚದಲ್ಲಿ ನೂತನ ಟರ್ಮಿನಲ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಈ ಭಾಗದ ವಿಮಾನ ಪ್ರಯಾಣಿಕರಿಗೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ.

    ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀೆಯಲ್ಲಿ ಐದನೇ ಸ್ಥಾನ ಪಡೆದಿರುವುದು ಈ ಭಾಗದ ಜನರಿಗೆ ಹೆಮ್ಮೆಯ ವಿಷಯವಾಗಿದೆ. ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಈ ಗೌರವಕ್ಕೆ ಪಾತ್ರವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ.

    ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಗ್ರಾಹಕರಿಗೆ ಒದಗಿಸುವ ವಿವಿಧ ಬಗೆಯ ಸೇವಾ ವಿಭಾಗದಲ್ಲಿ ಒಟ್ಟು 5 ಅಂಕಗಳಿಗೆ 4.95 ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರೂಪೇಶಕುಮಾರ ತಿಳಿಸಿದ್ದಾರೆ.

    ಉಡಾನ್ ಯೋಜನೆ ಜಾರಿಯಾದಾಗಿನಿಂದ ಹುಬ್ಬಳ್ಳಿಯಿಂದ ದೇಶದ ಹಲವು ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗಿದೆ. ಅದರಲ್ಲೂ ದೆಹಲಿ, ಬೆಂಗಳೂರು, ಹೈದ್ರಾಬಾದ, ಮುಂಬೈ, ಚೆನ್ನೆ$, ಮುಂತಾದ ನಗರಗಳಿಗೆ ವಿಮಾನ ಸೌಲಭ್ಯ ಲಭ್ಯವಿದೆ. ಇಂಡಿಗೋ, ಸ್ಪೆ$ಸ್ಜೆಟ್, ಏರ್ಇಂಡಿಯಾ, ಅಲಯನ್ಸ್ ಏರ್ ಮುಂತಾದ ಕಂಪನಿಗಳು ಪ್ರಯಾಣಿಕರಿಗೆ ಸೇವೆ ನೀಡುತ್ತಿವೆ.

    ಕೆಲ ವರ್ಷಗಳಿಂದ ಇಲ್ಲಿ ಕಾಗೋರ್ ಸೇವೆಯನ್ನೂ ಆರಂಭಿಸಲಾಗಿದೆ. ಹುಬ್ಬಳ್ಳಿ ಇದೀಗ ದೇಶದ ಎಲ್ಲ ಪ್ರಮುಖ ನಗರಗಳಿಗೆ ಸಂಪರ್ಕ ಸಾಧಿಸುತ್ತಿದೆ. ನಿತ್ಯ ಸುಮಾರು 15 ವಿಮಾನಗಳು ಇಲ್ಲಿಗೆ ಬಂದು ಹೋಗುತ್ತಿವೆ. ಸಾವಿರಾರು ಪ್ರಯಾಣಿಕರು ವಿಮಾನ ಸೇವೆ ಪಡೆಯುತ್ತಿದ್ದಾರೆ. ಈ ಎಲ್ಲ ಸೌಲಭ್ಯಗಳು ಗ್ರಾಹಕರಿಗೆ ತೃಪ್ತಿದಾಯಕ ಎನಿಸಿ ಟಾಪ್ ಐದರಲ್ಲಿ ವಿಮಾ ನಿಲ್ದಾಣ ಬಂದಿರುವುದು ಸಂತಸ ಹೆಚ್ಚಿಸಿದೆ.

    ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ 58 ಭಾರತೀಯ ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ 5ನೇ ಸ್ಥಾನ ಪಡೆದಿರುವುದು ಖುಷಿಯ ಸಂಗತಿ. ಈ ಮನ್ನಣೆ ಗಳಿಸಲು ಕಾರಣಕರ್ತರಾದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts