More

    ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೆ

    ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಮಾರ್ಪಾಟಾಗಲು ಹಸಿರು ನಿಶಾನೆ ದೊರೆತಿದೆ. ಮಾ. 10ರಂದು ಹೊಸ ಟರ್ವಿುನಲ್ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

    ದೇಶದಲ್ಲಿ ಒಟ್ಟು 9,811 ಕೋಟಿ ವೆಚ್ಚದಲ್ಲಿ 14 ಇತರ ವಿಮಾನ ನಿಲ್ದಾಣ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯವನ್ನು ಬೆಳಿಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ವರ್ಚ್ಯುವಲ್ ಮೂಲಕ ಪ್ರಧಾನಿ ನೆರವೇರಿಸಲಿದ್ದಾರೆ.

    ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವಿಮಾನ ನಿಲ್ದಾಣ ಅಭಿವೃದ್ಧಿಯನ್ನು ಕೈಗೊಂಡಿದೆ. ವಿಶ್ವ ದರ್ಜೆಯ ವಿಮಾನ ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

    ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಶ್ವದರ್ಜೆಗೇರಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಸಚಿವ ಪ್ರಲ್ಹಾದ ಜೋಶಿ ಅವರು ಸತತ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಿದ್ದರ ಫಲವಾಗಿ ವಿಶ್ವ ಮಟ್ಟದಲ್ಲಿ ಹುಬ್ಬಳ್ಳಿ ಗುರುತಿಸುವಂತಾಗಿದೆ.

    273 ಕೋಟಿ ರೂ ವೆಚ್ಚದಲ್ಲಿ ವಿಮಾನ ನಿಲ್ದಾಣ:

    15,950 ಚ.ಮಿ. ವಿಸ್ತೀರ್ಣದಲ್ಲಿ ಹೊಸ ನಿಲ್ದಾಣದಲ್ಲಿ 4 ಏರೋ ಬ್ರಿಜ್ ಸಹಿತ ಏಕ ಕಾಲಕ್ಕೆ 2,400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ, ಮತ್ತಿತರ ಸುಸಜ್ಜಿತ ಸೌಲಭ್ಯಗಳ ನಿಲ್ದಾಣವಾಗಲಿದೆ. ಈ ಹೊಸ ನಿಲ್ದಾಣ ಪರಿಸರ ಸ್ನೇಹಿಯಾಗಿರಲಿದೆ.

    ಹೊಸ ಟರ್ವಿುನಲ್ ಕಟ್ಟಡ ನಿರ್ವಣಗೊಂಡ ಬಳಿಕ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಏರಿಕೆಯಾಗುವ ನಿರೀಕ್ಷೆ ಇದೆ. ದೇಶದ ಹಲವು ನಗರಗಳಿಗೆ ಹುಬ್ಬಳ್ಳಿಯಿಂದ ವಿಮಾನ ಸೇವೆಯನ್ನು ಆರಂಭಿಸಲು ಸಹ ಅನುಕೂಲವಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts