More

    ಛಬ್ಬಿ ಗಣೇಶನ ಕಣ್ತುಂಬಿಕೊಂಡ ಭಕ್ತಸಾಗರ

    ಹುಬ್ಬಳ್ಳಿ: ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮೂರು ದಿನಗಳ ಕಾಲ ಪ್ರತಿಷ್ಠಾಪಿಸಿದ್ದ ಇತಿಹಾಸ ಪ್ರಸಿದ್ಧ ಸಿಂಧೂರ ಗಣೇಶನನ್ನು ನೋಡಲು ಭಕ್ತಸಾಗರವೇ ಹರಿದು ಬಂದಿತ್ತು.
    ಕುಲಕಣಿರ್ ಮನೆತನದವರು 7 ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಕೆಂಪು ಗಣೇಶನನ್ನು ನೋಡಲು ಜನ ಕೊನೆಯ ದಿನ ಶುಕ್ರವಾರ ಮುಗಿಬಿದ್ದಿದ್ದರು. ಉದ್ದದ ಸರತಿ ಸಾಲಿನಲ್ಲಿ ನಿಂತು ವಿಘ್ನೇಶ್ವರನ ದರ್ಶನ ಪಡೆದರು. ಇಷ್ಟಾರ್ಥ ಸಿದ್ಧಿ ವಿನಾಯಕ ಎಂದೇ ಪ್ರಸಿದ್ಧಿಯಾಗಿರುವ ಗಣೇಶನಲ್ಲಿ ಹರಕೆ ಹೊತ್ತುಕೊಂಡವರು, ಹರಕೆ ತೀರಿಸುವವರು ತಮ್ಮ ಪ್ರಾರ್ಥನೆ ಸಲ್ಲಿಸಿದರು. ಗಣೇಶನಿಗೆ ಕರಿಕೆ ಸರ್ಮಪಿಸಿ, ಪೂಜೆಗೈದ ಅಡಕೆ ಬೆಟ್ಟ ಮನೆಗೆ ಕೊಂಡೊಯ್ದರು.
    ಗ್ರಾಮದಲ್ಲಿ ಸಂರ್ಪೂಣವಾಗಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿತ್ತು. ಮಕ್ಕಳು, ಮಹಿಳೆಯರು, ವೃದ್ದರು ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಅಲ್ಲಲ್ಲಿ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮ ಪಂಚಾಯ್ತಿ ವತಿಯಿಂದ ಕಾರು, ದ್ವಿಚಕ್ರ ವಾಹನಗಳ ಪಾಕಿರ್ಂಗ್​ಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ರಾತ್ರಿ ಶಾಸೊಕ್ತವಾಗಿ, ಅದ್ಧೂರಿಯಾಗಿ ಗಣೇಶನ ವಿಸರ್ಜನೆ ಮಾಡಲಾಯಿತು. ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್​ಸ್ಪೆಕ್ಟರ್​ ರಮೇಶ ಗೋಕಾಕ ನೇತೃತ್ವದಲ್ಲಿ ವಿಶೇಷ ಭದ್ರತೆ ಕೈಗೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts