ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟಿಸಿದ ಪೌರ ಕಾರ್ಮಿಕರಿಗೆ ಮುಂದೇನಾಯಿತು?

ಹುಬ್ಬಳ್ಳಿ: ನೇರ ವೇತನ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಯೇ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದ ಪೌರ ಕಾರ್ಮಿಕರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಕಳೆದ ಹಲವಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ ಇಂದು ತೀವ್ರ ಸ್ವರೂಪ ಪಡೆದುಕೊಂಡಿತ್ತು. ನಾಲ್ಕು ತಿಂಗಳಿನಿಂದ ವೇತನ ನೀಡದ ಮಹಾನಗರ ಪಾಲಿಕೆಯ ಕ್ರಮವನ್ನು ಖಂಡಿಸಿ ಮಲ ಸುರಿದುಕೊಂಡು ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದನ್ನು ಗಮನಿಸಿದ ಪೊಲೀಸರು ಪ್ರತಿಭಟನಾ ನಿರತ ಸುಮಾರು 200 ಪೌರ ಕಾರ್ಮಿಕರನ್ನ ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್​)