More

    ‘ಗಂಭೀರ’ ಸಮಸ್ಯೆಯಿದ್ದರೆ ಕರೆ ಮಾಡಿ… ‘ವಿರಾಟ’ ರೂಪದಲ್ಲಿ ಸಹಾಯ ಮಾಡುತ್ತೇವೆ; ವೈರಲ್ ಆಯ್ತು ಹು-ಧಾ ಪೊಲೀಸರ ಟ್ವೀಟ್

    ಬೆಂಗಳೂರು: ಕಳೆದ ಸೋಮವಾರ(ಮೇ.01) ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಲಖನೌ ಸೂಪರ್​ ಜೈಂಟ್ಸ್​ ನಡುವೆ ನಡೆದ ಹಣಾಹಣಿ ಆಟಗಾರರ ನಡುವಿನ ಜಗಳಕ್ಕೆ ಕಾರಣವಾಗಿತ್ತು. ಭಾರತ ತಂಡದ ಸ್ಟಾರ್​ ಬ್ಯಾಟ್ಸ್​ಮ್ಯಾನ್​ ವಿರಾಟ್​ ಕೊಹ್ಲಿ ಹಾಗೂ ಲಖನೌ ತಂಡದ ಮೆಂಟರ್​ ಗೌತಮ್​ ಗಂಭೀರ್​ ನಡುವೆ ಮಾತಿನ ಚಕಮಕಿ ನಡೆದಿತ್ತು.

    112 ಸಹಾಯವಾಣಿಗೆ ಕರೆ ಮಾಡಿ

    ಇದೀಗ ಈ ವಿಷಯವನ್ನು ಮುಂದಿಟ್ಟುಕೊಂಡು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಜನರಿಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದೆ. ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ಇನ್ನಿತರ ತುರ್ತು ಸೇವೆಗಳಿಗೆ 112 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು 112 ಸಂಖ್ಯೆಗೆ ಕರೆ ಮಾಡಿದರೆ ಸ್ಪಂದನೆ ದೊರಕುತ್ತದೆ.

    ಗಂಭೀರ ಸಮಸ್ಯೆಯಿದ್ದರೆ ಕರೆ ಮಾಡಿ

    ಇದೀಗ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಕೊಹ್ಲಿ ಹಾಗೂ ಗಂಭೀರ್ ನಡುವಿನ ಮಾತಿನ ಚಕಮಕಿ ಫೋಟೋ ಬಳಸಿ ಟ್ವೀಟ್ ಮಾಡಿದ್ದು, ಯಾವುದೇ ‘ಗಂಭೀರ’ ಸಮಸ್ಯೆಗಳು ಉಂಟಾದಾಗ 112 ಗೆ ಕರೆ ಮಾಡಿ. ‘ವಿರಾಟ’ ರೂಪದಲ್ಲಿ ಸಹಾಯ ಮಾಡಲು ಹು-ಧಾ ನಗರ ಪೋಲಿಸ್ ಸದಾ ಸಿದ್ಧವಾಗಿರುತ್ತದೆ ಎಂದು ಹೇಳಿಕೊಂಡಿದೆ.

    ಹು-ಧಾ ನಗರ ಪೊಲೀಸರು ಮಾಡಿರುವ ಜಾಗೃತಿಯ ಟ್ವೀಟ್ ಇದೀಗ ಸಾರ್ವಜನಿಕರ ಗಮನ ಸೆಳೆದಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ. ತುರ್ತು ಸಂದರ್ಭದಲ್ಲಿ 112 ಸಹಾಯವಾಣಿಗೆ ಕರೆ ಮಾಡಿದರೆ ಪೊಲೀಸ್ ಇಲಾಖೆ ಕೂಡಲೇ ಸ್ಪಂದಿಸಿ, ಅಗತ್ಯ ನೆರವು ನೀಡುತ್ತದೆ.

    5 ನಿಮಿಷಗಳ ಒಳಗಾಗಿ ಸ್ಪಂದನೆ

    ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಆರ್​ಎಸ್ 112 ಎರಡು ತ್ರೈಮಾಸಿಕ ಪಟ್ಟಿಯಲ್ಲಿ ಪ್ರಥಮ ಸ್ಥಾನ ಪಡೆದಿದೆ. 2022ರ ಜುಲೈ-ಸೆಪ್ಟೆಂಬರ್ ಮತ್ತು ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಕ್ರಮವಾಗಿ ಸಾರ್ವಜನಿಕರು ಕರೆ ಮಾಡಿದ ಸರಾಸರಿ 5 ನಿಮಿಷಗಳ ಒಳಗಾಗಿ ಸ್ಪಂದಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts