ನಿಮ್ಮ ಪುಂಗಿ ನಮ್ಹತ್ರ ನಡೆಯಲ್ಲ; ಗಣೇಶ ಮಂಡಳಿಗಳಿಗೆ ಇನ್ಸ್‌ಪೆಕ್ಟರ್ ಎಚ್ಚರಿಕೆ

1343843
Published on

ಹುಬ್ಬಳ್ಳಿ: ನಾವು ನಮ್ಮ ಪುಂಗಿ ಊದುತ್ತೇವೆ. ನಮ್ಮ ಪುಂಗಿ ಮುಂದ ನಿಮ್ಮ ಪುಂಗಿ ನಡಿಯೋದಿಲ್ಲ ಎಂದು ಗಣೇಶ ಮಂಡಳಿಗಳಿಗೆ ಪೊಲೀಸ್ ಅಧಿಕಾರಿ ಶಾಮರಾವ್ ಸಜ್ಜನರ್​​ ಹೇಳಿರುವ ವಿಡಿಯೋ ವೈರಲ್ ಆಗಿದೆ.

ನಗರದ ಬೆಂಡಿಗೇರಿ ಪೊಲೀಸ್​ ಠಾಣೆಯ ಇನ್ಸ್‌ಪೆಕ್ಟರ್ ಸಜ್ಜನರ್​ ಅವರು ತಮ್ಮದೇ ಆದ ಶೈಲಿಯಲ್ಲಿ ತಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಯ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗಣೇಶ ನಿಮಜ್ಜನ ಮೆರವಣಿಗೆಯಲ್ಲಿ ಡಿಜೆ ಹಾಕಲು ಅವಕಾಶ ನೀಡುವುದಿಲ್ಲ ಎಂಬ ಎಚ್ಚರಿಕೆ ನೀಡಿರುವ ಇನ್ಸ್‌ಪೆಕ್ಟರ್ ಸಜ್ಜನರ್​ ಅವರು, ಪರೋಕ್ಷವಾಗಿ ಪೊಲೀಸರ ಎದುರು ಯಾರೂ ಏನೂ ನಡೆಯೋದಿಲ್ಲ ಎಂದು ಹೇಳಿರುವ ವಿಡಿಯೋ ಈಗ ಚರ್ಚೆಗೆ ಗ್ರಾಸವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net