ಹುಬ್ಬಳ್ಳಿ: ಹಿಂದು ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಕೊಲೆ ಬೆದರಿಕೆ, ಆರೋಪಿ ವಶಕ್ಕೆ!

a
Published on

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಹುಸೇನ್‌ ಬಂಧಿತ ಆರೋಪಿ.

ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು‌ ಕಿಮ್ಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ಒಳಪಡಿಸಿದ್ದಾರೆ. ಈ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ತಿಳಿದು ಪೋಷಕರು ಶಾಕ್​ ಆಗಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅನ್ಯಕೋಮಿನ ಯುವಕನ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿರುವುದಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರಿಂದ ಅಧಿಕೃತ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ ನವನಗರ ಎಪಿಎಂಸಿ ಠಾಣೆಗೆ ಪೋಷಕರು ಮೊದಲು ದೂರು ನೀಡಿದ್ದರು. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಾದರೂ ಎಫ್‌ಐಆರ್‌ ದಾಖಲಾಗದ್ದಕ್ಕೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಅಪ್ರಾಪ್ತೆ ಆಸ್ಪತ್ರೆಗೆ ಬಂದಿದ್ದುನ್ನು ಅರಿತು ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಿದರೆ ತಂದೆ-ತಾಯಿ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net