More

ಹುಬ್ಬಳ್ಳಿಯಲ್ಲಿ ನುಡಿ ಹಬ್ಬ

ಹುಬ್ಬಳ್ಳಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕದ ವತಿಯಿಂದ 8ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.4ರಂದು ಇಲ್ಲಿಯ ಉಣಕಲ್ಲ ಕೆರೆ ಹತ್ತಿರದ ಸಿದ್ದಪ್ಪಜ್ಜನವರ ಹೊಸಮಠದ ಕಲ್ಯಾಣ ಮಂಟಪ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8ಕ್ಕೆ ಮೇಯರ್ ಈರೇಶ ಅಂಚಟಗೇರಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಸಿ.ಬಿ. ಮರಿಗೌಡ್ರ ಅವರನ್ನು ಬೆಳಗ್ಗೆ 8.30ಕ್ಕೆ ಉಣಕಲ್ಲನ ಪುರಾತನ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಿಂದ ಭವ್ಯ ಮೆರವಣಿಗೆ ಮೂಲಕ ಕರೆ ತರಲಾಗುವುದು. ಕನ್ನಡ ಭುವನೇಶ್ವರಿ ದೇವಿಯ ಮೆರವಣಿಗೆಯು ಜಾನಪದ ಕಲಾ ತಂಡಗಳೊಂದಿಗೆ ನಡೆಯಲಿದೆ. ಮಹಾನಗರ ಪಾಲಿಕೆ ಸಭಾ ನಾಯಕ ತಿಪ್ಪಣ್ಣ ಮಜ್ಜಗಿ ಮೆರವಣಿಗೆಗೆ ಚಾಲನೆ ನೀಡುವರು ಎಂದರು.

ಕಸಾಪ ನಗರ ಘಟಕದ ಅಧ್ಯಕ್ಷ ಗುರುಸಿದ್ದಪ್ಪ ಬಡಿಗೇರ ಮಾತನಾಡಿ, ಬೆಳಗ್ಗೆ 10ಕ್ಕೆ ಸಮ್ಮೇಳನ ಉದ್ಘಾಟನೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಧ್ಯಕ್ಷತೆ ವಹಿಸುವರು. ಇಳಕಲ್ಲನ ನಿವೃತ್ತ ಪ್ರಾಚಾರ್ಯ ಶಂಭು ಬಳಿಗಾರ ಉದ್ಘಾಟನೆ ನೆರವೇರಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಹಾಲಪ್ಪ ಆಚಾರ, ಶಂಕರಪಾಟೀಲ ಮುನೇನಕೊಪ್ಪ ಇತರರು ಭಾಗವಹಿಸುವರು ಎಂದರು.

ಮಧ್ಯಾಹ್ನ 12 ಗಂಟೆಗೆ ಚಿಂತನ ಮಂಥನ ಗೋಷ್ಠಿಯ ಅಧ್ಯಕ್ಷತೆಯನ್ನು ಮಾಜಿ ಸಂಸದ ಐ.ಜಿ. ಸನದಿ ವಹಿಸುವರು. ಸಾಹಿತ್ಯ ಪ್ರಕಾಶನದ ಎಂ.ಎ. ಸುಬ್ರಮಣ್ಯ ಅವರು ಅತಿಥಿಯಾಗಿ ಪಾಲ್ಗೊಳ್ಳುವರು.

ಸಾಂಸ್ಕೃತಿಕ ಪರಂಪರೆ ಮತ್ತು ಆಧುನಿಕತೆ ಕುರಿತ ಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ. ಎಸ್.ಕೆ. ಆದಪ್ಪನವರ ವಹಿಸುವರು. ಕಿಮ್್ಸ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಡಿಐಸಿ ಜಂಟಿ ನಿರ್ದೇಶಕ ಪಿ. ರಮೇಶ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

ಮಧ್ಯಾಹ್ನ 3.30ಕ್ಕೆ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಭಾರತಿ ಹಿರೇಮಠ ವಹಿಸುವರು. 30ಕ್ಕೂ ಹೆಚ್ಚು ಕವಿಗಳು ಕವನ ವಾಚನ ಮಾಡುವರು. 5.30ಕ್ಕೆ ಬಹಿರಂಗ ಅಧಿವೇಶನ ನಡೆಯಲಿದೆ.

ಸಂಜೆ 6ಕ್ಕೆ ಸಮಾರೋಪ ನಡೆಯಲಿದ್ದು, ಕಾರ್ವಿುಕ ಮುಖಂಡ ಡಾ. ಕೆ.ಎಸ್. ಶರ್ಮಾ ಅಧ್ಯಕ್ಷತೆ ವಹಿಸುವರು. ಮಕ್ಕಳ ಸಾಹಿತಿ ನಿಂಗಣ್ಣ ಕುಂಟಿ ಸಮಾರೋಪ ಭಾಷಣ ಮಾಡುವರು.

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ಷಣ್ಮುಖ ಕೋಳಿವಾಡ, ಅಮರೇಗೌಡ ಗೋನವಾರ, ಗುರುರಾಜ ಹೂಗಾರ ಹಾಗೂ ಸಂಜೆ ದರ್ಪಣದ ಮುಖ್ಯಸ್ಥರನ್ನು ಸನ್ಮಾನಿಸಲಾಗುವುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮಾತನಾಡಿ, ಸಾರ್ವಜನಿಕರಿಂದ ಹಣ ಪಡೆಯದೇ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದೆ. ಮಹಾನಗರ ಪಾಲಿಕೆ ಸದಸ್ಯರು ಕೈಗೂಡಿಸಿದ್ದಾರೆ. ಸರ್ಕಾರ ಇನ್ನಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಪಾಲಿಕೆ ಸದಸ್ಯ ಉಮೇಶಗೌಡ ಕೌಜಗೇರಿ, ಕಸಾಪ ಪದಾಧಿಕಾರಿಗಳಾದ ಆರ್.ಎಂ. ಗೋಗೇರಿ, ಚನ್ನಬಸಪ್ಪ ಧಾರವಾಡಶೆಟ್ಟರ, ಗಿರೀಜಾ ಚಿಕ್ಕಮಠ, ಸಂಧ್ಯಾ ದೀಕ್ಷಿತ, ಜಯಶ್ರೀ ಬೇವೂರ, ಡಾ. ಬಸವರಾಜ ಮಾಳವಾಡ ಗೋಷ್ಠಿಯಲ್ಲಿದ್ದರು.

ಸಿನಿಮಾ

ಲೈಫ್‌ಸ್ಟೈಲ್

ಟೆಕ್ನಾಲಜಿ

Latest Posts