ಹುಬ್ಬಳ್ಳಿಯ ಬಿವಿಬಿ ಕ್ಯಾಂಪಸ್​ನಲ್ಲಿ ನಿರ್ಮಾಣವಾಗಿರುವ ಹೈಟೆಕ್ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಅಮಿತ್​ ಷಾ

Amit Shah
Published on

ಹುಬ್ಬಳ್ಳಿ: ಕೆಎಲ್​ಇ ತಾಂತ್ರಿಕ ವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಉತ್ತರ ಕರ್ನಾಟಕದ ಮೊದಲ ಹೈಟೆಕ್ ಮತ್ತು ವಿಶಾಲವಾದ ಸುಸಜ್ಜಿತ ಕ್ರೀಡಾಂಗಣವನ್ನು ಉದ್ಘಾಟಿಸಿದರು.

ಬಿವಿಬಿ ಕ್ಯಾಂಪಸ್​ನಲ್ಲಿ ನಿರ್ಮಾಣ ಮಾಡಿರುವ ಹೈಟೆಕ್ ಒಳಾಂಗಣ ಕ್ರೀಡಾಗಣವನ್ನು ಅಮಿತ್​ ಷಾ ಅವರು ಟೇಪ್​ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಕ್ರೀಡಾಂಗಣದಲ್ಲಿ ಸುಮಾರು 3 ಸಾವಿರ ಜನ ಕುಳಿತುಕೊಂಡು ಪಂದ್ಯಾವಳಿಗಳನ್ನು ವೀಕ್ಷಣೆ ಮಾಡಬಹುದು. ಒಂದೇ ಸೂರಿನಡಿ ಟೆನ್ನಿಸ್, ಬ್ಯಾಡ್ಮಿಂಟನ್​, ಟೇಬಲ್ ಟೆನ್ನಿಸ್, ಬ್ಯಾಸ್ಕೆಟ್ ಬಾಲ್, ಹೈಟೆಕ್ ಜಿಮ್ ಹಾಗೂ ವಿಶಾಲ ಮೈದಾನವಿದೆ.

ತ‌ಂತ್ರಜ್ಞಾನ ಜೊತೆಗೆ ಕ್ರೀಡೆಗೆ ಪ್ರೊತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದೆ. ಕೇಂದ್ರ ಸಚಿವ ಅಮಿತ್ ಷಾಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಸಾಥ್​ ನೀಡಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net