More

    ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಕೇಸ್​: ನಟ ಧ್ರುವ ಸರ್ಜಾ ಸರ್ಕಾರಕ್ಕೆ ಹೇಳಿದ ಕಿವಿ ಮಾತೇನು?

    ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್​ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಪ್ರತಿಕ್ರಿಯೆ ನೀಡಿದ್ದಾರೆ. ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

    ಇದನ್ನೂ ಓದಿ: ಆಂಧ್ರಪ್ರದೇಶ: ಚಂದ್ರಬಾಬು ನಾಯ್ಡು ಆಸ್ತಿ ಮೌಲ್ಯ 810 ಕೋಟಿ ರೂ.; 5 ವರ್ಷದಲ್ಲಿ 41% ಆಸ್ತಿ ಹೆಚ್ಚಳ

    ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗೂ ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು ಎಂದು ನಟ ಧ್ರುವ ಸರ್ಜಾ ಒತ್ತಾಯಿಸಿದ್ದಾರೆ.

    ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. 10 ಬಾರಿ ಇರಿದು ಕೊಂದ ಆರೋಪಿ ಫಯಾಜ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಜಸ್ಟೀಸ್ ಫಾರ್ ನೇಹಾ ಅನ್ನೋ ಟ್ರೆಂಡಿಂಗ್ ಆಗಿದ್ದು ಕೊಲೆಗಾರನ ಮೇಲೆ ನೆಟ್ಟಿಗರು ಕೆಂಡಕಾರುತ್ತಿದ್ದಾರೆ.
    ಇದೀಗ ನೇಹಾ ಸಾವಿಗೆ ವಿದ್ಯಾರ್ಥಿಗಳು, ನೆಟ್ಟಿಗರು ಆಕ್ರೋಶ ಭರಿತ ಪೋಸ್ಟ್‌ಗಳನ್ನ ಹಾಕುತ್ತಿದ್ದಾರೆ. ಆರೋಪಿ ಕಠಿಣ ಶಿಕ್ಷೆಯಾಗಬೇಕು ಆಗಿದ್ದಾಗ ಮಾತ್ರ ಇಂತಹ ಕೃತ್ಯಗಳು ನಡೆಯುವುದಿಲ್ಲ ಎಂದಿದ್ದಾರೆ.

    ಆಂಧ್ರಪ್ರದೇಶ: ವೈಎಸ್​ಆರ್​ಸಿಪಿ ಪ್ರಚಾರ ವಾಹನ ಡಿಕ್ಕಿ, 9 ವರ್ಷದ ಬಾಲಕ ಸಾವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts