More

    8 ಸೇತುವೆ, 76 ಮನೆ, 100ಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿ; ಉಡುಪಿ ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತಕ್ಕೆ ಜನಜೀವನ ಅಸ್ತವ್ಯಸ್ತ

    ಉಡುಪಿ: ರಾಜ್ಯಕ್ಕೆ ಅಪ್ಪಳಿಸಿದ್ದ ತೌಕ್ತೆ ಚಂಡಮಾರುತ ಉಡುಪಿ ಜಿಲ್ಲೆಯಲ್ಲಂತೂ ಭಾರಿ ಅವಾಂತರ ಸೃಷ್ಟಿಸಿದ್ದು, 8 ಸೇತುವೆಗಳು ಹಾನಿಗೀಡಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮತ್ತೊಂದೆಡೆ ಎರಡು ದಿನ ಭಾರಿ ಮಳೆ ಸುರಿದಿದ್ದು, ಬೈಂದೂರು ತಾಲೂಕಿನಲ್ಲಿ ಗರಿಷ್ಠ ಮಳೆ ದಾಖಲಾಗಿದೆ.

    ತೌಕ್ತೆ ಚಂಡಮಾರುತ ಅಪ್ಪಳಿಸಿದ್ದರಿಂದಾಗಿ ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಒಟ್ಟು 75 ಮಿ.ಮೀ. ಮಳೆಯಾಗಿದ್ದರೆ, ಬೈಂದೂರು ತಾಲೂಕೊಂದರಲ್ಲೇ ಅತಿ ಹೆಚ್ಚಿನ ಅಂದರೆ 300 ಮಿ.ಮೀ. ಮಳೆ ದಾಖಲಾಗಿದೆ. ಇಲ್ಲಿನ ನಾಡ ಕಿರಿಮಂಜೇಶ್ವರ ಗ್ರಾಮದಲ್ಲಿ ಇಷ್ಟೊಂದು ಮಳೆ ಸುರಿದಿದೆ.

    ಇದನ್ನೂ ಓದಿ: ಮಗ ಮಾಡಿದ ಆ ಒಂದು ಕೆಲಸ ಅಮ್ಮನನ್ನೂ ಬಲಿ ಪಡೆಯಿತಾ?; ಪತಿ ಸತ್ತ ಕೆಲವೇ ಕ್ಷಣಗಳಲ್ಲಿ ಪತ್ನಿಗೂ ಸಾವು!

    ಚಂಡಮಾರುತದಿಂದಾಗಿ ಜಿಲ್ಲೆಯಲ್ಲಿ 76 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಏಳು ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ 60 ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ಇನ್ನು ಚಂಡಮಾರುತದ ಪರಿಣಾಮವಾಗಿ 5 ಕಿಲೋಮೀಟರ್ ಉದ್ದಕ್ಕೂ ಕಡಲ್ಕೊರೆತ ಉಂಟಾಗಿದ್ದು, 2 ಕಿ.ಮೀ. ಮೀನುಗಾರಿಕಾ ರಸ್ತೆ ಹಾನಿಗೀಡಾಗಿದೆ. 18 ಮೀನುಗಾರಿಕಾ ಬೋಟ್​ಗಳಿಗೂ ಹಾನಿಯಾಗಿದ್ದು, 8 ಟ್ರಾನ್ಸ್​ಫಾರ್ಮರ್​ಗಳು 100ಕ್ಕೂ ಅಧಿಕ ವಿದ್ಯುತ್ ಕಂಬಗಳಗೆ ಹಾನಿ ಆಗಿವೆ.

    ಸಾಯುವವನು ಎಲ್ಲಿ ಬೇಕಾದ್ರೂ ಸಾಯಲಿ, ನಾನು ಇಲ್ಲಿ ಕೋವಿಡ್ ಸೆಂಟರ್ ತೆರೆಯಲ್ಲ: ಬಿಜೆಪಿ ಶಾಸಕರ ಖಡಾಖಂಡಿತ ಮಾತು

    ಒಂದೇ ಮನೆಯ ನಾಲ್ವರು ಕರೊನಾಗೆ ಬಲಿ; 2- 3 ದಿನಗಳ ಅಂತರದಲ್ಲಿ ಇಬ್ಬಿಬ್ಬರ ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts