More

  ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯೇತರ ಚಟುವಟಿಕೆಗಳ ಪಾತ್ರ ಅಪಾರ: ವರ್ಗಪ್ಪನವರ್

  Gadag: ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರು ಪ್ರಾಮಾಣಿಕ ಪ್ರಯತ್ನವನ್ನು ಮಾಡಿದಾಗ ಮಾತ್ರ ತಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಮತ್ತು ವಿದ್ಯಾರ್ಥಿಗಳ ಸರ್ವೋತ್ತೋಮುಖ ವಿಕಾಸದಲ್ಲಿ ಪಠ್ಯೇತರ ಚಟುವಟಿಕೆಗಳ ಪಾತ್ರ ಅಪಾರ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪಿ ಎಂ ವರ್ಗಪ್ಪನವರ್ ವಿದ್ಯಾರ್ಥಿಗಳಿಗೆ ತಿಳಿಸಿದರು

  ಅವರು ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ 2023-24ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಹಾಗೂ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಸ್ಥಾನಿಕ ಸಮಿತಿ ಅಧ್ಯಕ್ಷರಾದ ಶ್ರೀಯುತ ಆರ್ ಕೆ ಹಬೀಬ ರವರು ಮಾತನಾಡಿ ವಿದ್ಯಾರ್ಥಿಗಳು ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಆದರ್ಶರಾಗುವುದರೊಂದಿಗೆ ಉತ್ತಮ ಸಾಧನೆಗೈಯಲು ತಿಳಿಸಿದರು.

  ದೈಹಿಕ ಶಿಕ್ಷಣ ನಿರ್ದೇಶಕರಾದ ಶಶಿಕಾಂತ್ ಕೊರ್ಲಹಳ್ಳಿ ಅವರು ನೂತನ ಒಕ್ಕೂಟದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು ಮಹಾವಿದ್ಯಾಲಯದ ಸ್ಥಾನಿಕ ಸಮಿತಿ ಸದಸ್ಯರಾದ ಶ್ರೀ ರವಿ ಕುಲಕರ್ಣಿ ಉಪಸ್ಥಿತರಿದ್ದರು ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀ ಎಸ್ ಎಲ್ ಪಾಟೀಲ್ ರವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಕಾರ್ಯಕ್ರಮವನ್ನು ಕುಮಾರಿ ವಿಜಯಲಕ್ಷ್ಮಿ ಬೊಮ್ಮಣ್ಣವರ್ ಹಾಗೂ ಸಂಗಡಿಗರು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು ಶ್ರೀಮತಿ ಎಂ ಸಿ ಅಬ್ಬಿಗೇರಿ ಕಾರ್ಯಕ್ರಮವನ್ನು ನೆರವೇರಿಸಿದರು ಶ್ರೀ ಎಂ ಡಿ ಮಾದರ ಕಾರ್ಯಕ್ರಮದಲ್ಲಿ ನಿರೂಪಿಸಿದರು ಶ್ರೀಮತಿ ಜಿ ಎಫ್ ಕಾಯಕದ ಎಲ್ಲರಿಗೂ ವಂದಿಸಿದರು ಕಾರ್ಯಕ್ರಮದಲ್ಲಿ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಯವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು 

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts