More

     ಹುಲಿಗೆಮ್ಮದೇವಿ ಜಾತ್ರೋತ್ಸವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಿ

    ಕೊಪ್ಪಳ: ಹುಲಿಗಿಯ ಹುಲಿಗೆಮ್ಮದೇವಿ ಜಾತ್ರೋತ್ಸವವನ್ನು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಏರ್ಪಾಡು ಮಾಡಬೇಕು ಎಂದು ದೇವಸ್ಥಾನ ಆಡಳಿತಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಹೇಳಿದರು.


    ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶುಕ್ರವಾರ ಮಾತನಾಡಿದರು. ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕುಡಿವ ನೀರು, ನೆರಳು, ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. ಸಂಪರ್ಕ ರಸ್ತೆ ಹಾಗೂ ಬೈಪಾಸ್ ರಸ್ತೆಗಳನ್ನು ಸರಿಪಡಿಸಬೇಕು.

    ಸ್ನಾನದ ಗೃಹಗಳ ಮತ್ತು ಶೌಚಗೃಹಗಳ ವ್ಯವಸ್ಥೆ ಮಾಡಿ

    ತಾತ್ಕಾಲಿಕವಾಗಿ ಸಾಮೂಹಿಕ ಸ್ನಾನದ ಗೃಹಗಳ ಮತ್ತು ಶೌಚಗೃಹಗಳ ವ್ಯವಸ್ಥೆ ಮಾಡಬೇಕು. ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು, ದೇವಸ್ಥಾನದ ಗುಡಿ-ಗೋಪುರಗಳಿಗೆ ವಿದ್ಯುತ್ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆಯನ್ನು ಮಾಡಬೇಕು. ಸಿಸಿ ಕ್ಯಾಮರಾ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್ ಬಂದೋಬಸ್ತ್ತ್ ಕ್ರಮ ವಹಿಸಬೇಕು. ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಇದನ್ನೂ ಓದಿ: ವಿಶ್ವರೂಪಿಣಿ ಹುಲಿಗೆಮ್ಮನಾದ ಪ್ರಿಯಾಂಕಾ; ದೇವಿ ಮಹಾತ್ಮೆ ಸಾರುವ ಚಿತ್ರಕ್ಕೆ ಸಾಯಿಪ್ರಕಾಶ್ ನಿರ್ದೇಶನ

    ಕೆಕೆಆರ್‌ಟಿಸಿಯವರು ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆ ಕಲ್ಪಿಸಿ

    ಜಾತ್ರೆಗೆ ವಿವಿಧ ಭಾಗಗಳಿಂದ ಭಕ್ತರು ಆಗಮಿಸಲಿದ್ದು, ಕೆಕೆಆರ್‌ಟಿಸಿಯವರು ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆ ಕಲ್ಪಿಸಬೇಕು. ಜಾತ್ರೆ ಸಮಯದಲ್ಲಿ ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ಹುಬ್ಬಳ್ಳಿ ರೈಲ್ವೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು.

    ರಸ್ತೆಯ ಮೇಲೆ ಅಂಗಡಿ ಮುಂಗಟ್ಟುಗಳನ್ನು ಇಡದಂತೆ ನೋಡಿಕೊಳ್ಳಿ

    ಜಾತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದೇವಸ್ಥಾನಕ್ಕೆ ಎಲ್ಲ ರೀತಿಯ ಸಹಕಾರವನ್ನು ಹುಲಿಗಿ ಗ್ರಾಪಂ ನೀಡಬೇಕು. ದೇವಸ್ಥಾನಕ್ಕೆ ಹೋಗುವ ರಸ್ತೆಯ ಮೇಲೆ ಅಂಗಡಿ ಮುಂಗಟ್ಟುಗಳನ್ನು ಇಡದಂತೆ ಕ್ರಮ ಕೈಗೊಳ್ಳಿ, ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿದ್ದು, ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಜಾತ್ರಾ ಸಮಯದಲ್ಲಿ ಮದ್ಯಪಾನ ನಿಷೇಧಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.


    ಮೇ 6ರಿಂದ ವಿವಿಧ ಕಾರ್ಯಕ್ರಮ

    ಹುಲಿಗೆಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಮೇ 13ರ ಸಂಜೆ ನಡೆಯಲಿದೆ. ಜಾತ್ರೆ ನಿಮಿತ್ತ ಮೇ 6ರಿಂದ ಮೇ 16ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ದೇವಸ್ಥಾನದ ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣಪತ್ರ ಪಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಪಿಡಬ್ಲುೃಡಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಾತ್ರೆ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು ಎಂದು ಅಧಿಕಾರಿಗಳಿಗೆ ಎಡಿಸಿ ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts