More

    ಮಾನವೀಯ ಸಂಬಂಧಗಳು ಮರೆಯಾಗುತ್ತಿವೆ

    ರಾಯಚೂರು: ಪ್ರಸ್ತುತ ದಿನಮಾನದಲ್ಲಿ ಆಧುನಿಕ ತಂತ್ರಜ್ಞಾನದಿಂದಾಗಿ ಜನರು ಮಾನವೀಯ ಸಂಬಂಧಗಳನ್ನು ಮರೆಯುತ್ತಿದ್ದು, ಜತೆಗೆ ಮಾನಸಿಕ ಖಿನ್ನತೆ ಒಳಗಾಗುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೇಲೂರೆ ಖೇದ ವ್ಯಕ್ತಪಡಿಸಿದರು.
    ಸ್ಥಳೀಯ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರು ಮಾನಸಿಕ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹಿಂಜರಿಯದೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದರು.
    ದೈನಂದಿನ ಕೆಲಸದ ಒತ್ತಡ, ಕೌಟುಂಬಿಕ ಮತ್ತು ಆರ್ಥಿಕ ಸಮಸ್ಯೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾನಸಿಕ ಖಿನ್ನತೆಗೆ ತುತ್ತಾಗುತ್ತಿದ್ದಾರೆ. ಇದರಿಂದ ಆತ್ಮಹತ್ಯೆಗೂ ಮುಂದಾಗುತ್ತಾರೆ. ಯಾವುದೇ ಸಮಸ್ಯೆಗಳಿದ್ದರೂ ವೈದ್ಯರನ್ನು ಸಂಪರ್ಕಿ ಸಮಾಲೋಚನೆ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
    ಆರೋಗ್ಯ ಇಲಾಖೆ ಕಲಬುರಗಿ ವಿಭಾಗೀಯ ನಿರ್ದೇಶಕ ಡಾ.ಶರಣಪ್ಪ ಮಾತನಾಡಿ, ಮಾನಸಿಕ ರೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಇಲಾಖೆಯಿಂದ ಮಾನಸಿಕ ರೋಗ ಲಕ್ಷಣ ಹೊಂದಿರುವ ವ್ಯಕ್ತಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಬೇಕು ಎಂದರು.
    ಡಿಎಚ್‌ಒ ಡಾ.ಸುರೇಂದ್ರಬಾಬು ಮಾತನಾಡಿ, ಇಂದಿನ ದಿನಮಾನದಲ್ಲಿ ಮಕ್ಕಳ ಮೇಲೆ ಶಿಕ್ಷಣದ ಒತ್ತಡ ಹೆಚ್ಚಾಗುತ್ತಿದ್ದು, ಮಕ್ಕಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಜತೆಗೆ ಅನುವಂಶೀಯ ಕಾಯಿಲೆಗಳಿಂದ ಕೆಲವರು ಮಾನಸಿಕ ರೋಗಕ್ಕೆ ಗುರಿಯಾಗುತ್ತಿದ್ದಾರೆ. ಅಂತವರು ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ಮಾನಸಿಕ ರೋಗ ತಜ್ಞ ಡಾ.ಮನೋಹರ ಪತ್ತಾರ, ಕಾರ್ಯಕ್ರಮ ಅನುಷ್ಠಾನಾಕಾರಿ ಡಾ.ಎನ್.ಯಶೋಧ, ವೈದ್ಯಕೀಯ ಕಾಲೇಜು ಉಪನ್ಯಾಸಕಿ ಡಾ.ಲಾವಣ್ಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts