ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲಿ ಮಾನವ ಸಂಪನ್ಮೂಲ ಸೇವೆ ಅವಶ್ಯಕ ಎಂದು ಸಿದ್ಧಗಂಗಾ ಮಠದ ಪೀಠಾಧ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.
ಗಾಂಧಿನಗರದಲ್ಲಿ ಕರ್ನಾಟಕ ಮಾನವ ಸಂಪನ್ಮೂಲ ಸೇವೆ ಒದಗಿಸುವ ಗುತ್ತಿಗೆದಾರರ ಸಂಘದ ನೂತನ ಕಚೇರಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ದೇಶ ಮತ್ತು ರಾಜ್ಯದ ಆರ್ಥಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಸಂಸ್ಥೆ, ಮಾನವೀಯ ಮೌಲ್ಯ ಹೆಚ್ಚಿಸಿ ಮಾನವ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವ ಕೆಲಸ ಮಾಡುತ್ತಿದೆ. ಸಾಕಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುತ್ತಿದೆ ಎಂದು ಶ್ರೀಗಳು ಸಂಸ್ಥೆ ಕಾರ್ಯವನ್ನು ಶ್ಲಾಘಿಸಿದರು. ಸೇವಾ ಕ್ಷೇತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಸೇವಾ ಕಾರ್ಯವನ್ನು ಎಲ್ಲರ ಮೆಚ್ಚುಗೆಯಾಗುವಂತೆ ನಡೆದುಕೊಳ್ಳಬೇಕು ಎಂದರು.
ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಉತ್ತರಾಧಿಕಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ದೇಶದಲ್ಲಿ ಮಾನವ ಸಂಪನ್ಮೂಲ ಸೇವೆ ದೊಡ್ಡದಾಗುತ್ತಿದೆ. ಸೇವಾ, ಔದ್ಯೋಗಿಕ ಕ್ಷೇತ್ರ, ಬ್ಯಾಂಕಿಂಗ್ ಮತ್ತು ಹೋಟೆಲ್ನಂತಹ ಉದ್ಯಮಗಳು ವೇಗವಾಗಿ ಬೆಳೆಯುತ್ತಿವೆ. ಶಾಲಾ- ಕಾಲೇಜು, ಆಸ್ಪತ್ರೆಗಳು ಸೇರಿ ವಿವಿಧ ಕ್ಷೇತ್ರಗಳ ಬೆಳವಣಿಗೆಗಳಿಗೆ ಮಾನವ ಸಂಪನ್ಮೂಲ ಅತ್ಯಮೂಲ್ಯವಾಗಿದೆ ಎಂದರು.
ಎಫ್ಕೆಸಿಸಿಐ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಸಂಘದ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ, ಉಪಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ರೆಡ್ಡಿ, ಜಂಟಿ ಕಾರ್ಯದರ್ಶಿ ದಯಾನಂದ್ ಮತ್ತಿತರರಿದ್ದರು.
ಭಾಷೆ ಇಲ್ಲದಿದ್ದರೆ ಜಗತ್ತು ಕತ್ತಲೆಯೆಡೆಗೆ: ಹಿರಿಯ ಸಾಹಿತಿ ಹಂಪನಾ ಅಭಿಮತ