ಕಾರವಾರ: ವಿದ್ಯಾಭ್ಯಾಸಕ್ಕಾಗಿ ತಮ್ಮ ಪೋಷಕರನ್ನು ಬಿಟ್ಟು ಬಂದು ಹಾಸ್ಟೆಲ್ (Hostel ) ಗಳಲ್ಲಿ ನೆಲೆಸಿ, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು, ಹಾಸ್ಟೆಲ್ ಗಳ ವಾರ್ಡನ್‌ಗಳು ತಮ್ಮ ಮಕ್ಕಳ ರೀತಿಯಲ್ಲಿ ಕಾಳಜಿ ವಹಿಸಬೇಕು ಎಂದು ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ. ವಂಟಿಗೋಡಿ ಸೂಚನೆ ನೀಡಿದರು.
ಅವರು ಮಂಗಳವಾರ ಕಾರವಾರದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತಹ ಚಟುವಟಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯವ ನೀರು ಒದಗಿಸಿ, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳು ಮತ್ತು ತಾಜಾ ತರಕಾರಿಗಳನ್ನು ಬಳಸಿ ಆಹಾರ ನೀಡುವಂತೆ ಮತ್ತು ಸ್ನಾನಕ್ಕೆ ಬಿಸಿನೀರಿನ ಕೊರತೆ ಆಗದಂತ ಗೀಸರ್ ಅಳವಡಿಸುವಂತೆ ಸೂಚಿಸಿದರು.
Hostel ಗಳಿಗೆ ಪೇಂಟ್ ಮಾಡಿಸಿ
ಹಾಸ್ಟೆಲ್(Hostel)ಗಳಿಗೆ ಪೈಂಟ್ ಮಾಡಿಸುವಂತೆ ಹಾಗೂ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡುವಂತೆ ನಿರ್ದೇಶಿಸಿದ ಅವರು, ವಿದ್ಯಾರ್ಥಿಗಳಿಗೆ ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುವಂತೆ ಮತ್ತು ವಿದ್ಯಾರ್ಥಿಗಳಿಗೆ ಸರಕಾರದಿಂದ ಸರಬರಾಜಾಗುವ ಸೌಲಭ್ಯಗಳನ್ನು ಕಾಲಕಾಲಕ್ಕೆ ತಪ್ಪದೇ ತಲುಪಿಸುವಂತೆ ತಿಳಿಸಿದರು. ಅಡುಗೆ ಮನೆಗೆ ಭೇಟಿ ನೀಡಿ, ಸ್ವತ: ಆಹಾರ ಸೇವಿಸಿ, ಆಹಾರ ಪದಾರ್ಥಗಳು ಹಾಳಾಗದಂತೆ ಎಚ್ಚರವಹಿಸುವಂತೆ ಮತ್ತು ಫ್ರಿಡ್ಜ್ನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದರು. ಹಾಸ್ಟೆಲ್ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಅವರು, ಹಾಸ್ಟೆಲ್‌ಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡುತ್ತಿರುವ ಬಗ್ಗೆ ಮತ್ತು ಕುಂದು ಕೊರತೆಗಳ ಬಗ್ಗೆ ವಿಚಾರಿಸಿ, ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸುವಂತೆ
ವಿದ್ಯಾರ್ಥಿನಿಯರಿಗೆ ತಿಳಿಸಿದರು.
ನಂತರ ಕಾರವಾರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರವಾರದ ಸರ್ಕಾರಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಬಸ್ ನಿಲ್ದಾಣದಲ್ಲಿ ಸ್ವಚ್ಚತೆಯನ್ನು ಕಾಪಾಡುವಂತೆ ತಿಳಿಸಿದರು. ಕುಡಿಯುವ ನೀರಿನ ಯಂತ್ರ ಹಾಳಾಗಿರುವುದನ್ನು ಪರಿಶೀಲಿಸಿದ ಅವರು ತಕ್ಷಣ ಅದನ್ನು ಸರಿಪಡಿಸಿ ಸಾರ್ವಜನಿಕ ಬಳಕೆಗೆ ಯೋಗ್ಯವಾಗುವಂತೆ ಮಾಡಿ ಎಂದು ಸೂಚನೆ ನೀಡಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸತೀಶ್ ಜಿಲ್ಲಾ ಸರ್ಜನ್ ಶಿವಾನಂದ ಕುಡ್ತಳಕರ್, ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.
https://www.facebook.com/share/p/19MsfYLQic/
Airport ಗಾಗಿ ಅಂಕೋಲಾದಲ್ಲಿ 1 ತಿಂಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ