Jail ಕಿಟಕಿಗಳಿಗೆ ಸೊಳ್ಳೆ ಬರದಂತೆ ಬಲೆ ಹೊಡೆಯಲು ಮಾನವ ಹಕ್ಕು ಆಯೋಗ ಆದೇಶ

Jail

ಕಾರವಾರ : ಜಿಲ್ಲಾ ಕಾರಾಗೃಹ (Jail) ದ ನಿವಾಸಿಗಳಿಗೆ ಸೊಳ್ಳೆ ಕಡಿತವಾಗದಂತೆ ತಡೆಯಲು ಜೈಲಿನ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಶ್ ಹಾಕಿಸಿ ಹಾಗೂ ಗೋಡೆಗಳಿಗೆ ಹೊಸದಾಗಿ ಪೈಂಟ್ ಮಾಡಿಸುವಂತೆ ಕಾರಾಗೃಹ ಇಲಾಖೆಯ ಅಧಿಕಾರಿಗಳಿಗೆ ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ. ವಂತಿಕೋಡಿ ಸೂಚನೆ ನೀಡಿದರು.

ಅವರು ಸೋಮವಾರ ಕಾರವಾರದ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರಾಗೃಹವಾಸಿಗಳು ಜೈಲಿನಲ್ಲಿ ಸೊಳ್ಳೆಯ ಸಮಸ್ಯೆಯ ಬಗ್ಗೆ ತಿಳಿಸಿದರು, ಈ ಕುರಿತಂತೆ ಜೈಲು ಕೊಠಡಿಯ ಕಿಟಕಿಗಳಿಗೆ ಸೊಳ್ಳೆಗಳು ಬಾರದಂತೆ ಮೆಸ್ ಅಳವಡಿಸುವಂತೆ ಸೂಚಿಸಿದ ಅವರು ಜೈಲಿನ ಗೋಡೆಗಳಿಗೆ ಪೈಂಟ್ ಮಾಡಿ ಹಲವು ವರ್ಷಗಳು ಕಳೆದಿರುವುದನ್ನು ಕಂಡು ಉತ್ತಮ ಗುಣಮಟ್ಟದ ಪೈಂಟ್ ಮಾಡಿಸುವಂತೆ ಹಾಗೂ ಕಾರಾಗೃಹದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಮತ್ತು ವೈದ್ಯರಿಂದ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸುವಂತೆ ಸೂಚಿಸಿದರು.

ಕಾರಾಗೃಹದ ಅಡುಗೆ ಮನೆಗೆ ಭೇಟಿ ನೀಡಿ, ಸ್ವತ: ಆಹಾರ ಸೇವಿಸಿ, ಯಾವುದೇ ಕಾರಣಕ್ಕೂ ಆಹಾರದ ಗುಣಮಟ್ಟದಲ್ಲಿ ಕೊರತೆ ಕಂಡುಬಾರದ0ತೆ ಎಚ್ಚರಿಕೆ ವಹಿಸುವಂತೆ ಹಾಗೂ ತಾಜಾ ಮತ್ತು ಗುಣಮಟ್ಟದ ಕಾಳುಗಳು ಮತ್ತು ತರಕಾರಿಗಳನ್ನು ಬಳಕೆ ಮಾಡುವಂತೆ ಹಾಗೂ ಕೊಠಡಿಗಳು ಮತ್ತು ಶೌಚಾಲಯಗಳಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡುವಂತೆ ನಿರ್ದೇಶನ ನೀಡಿದರು.

Jail ವಾಸಿಗಳೊಂದಿಗೆ ಮಾತುಕತೆ

ಕಾರಾಗೃಹವಾಸಿಗಳೊಂದಿಗೆ ಮಾತನಾಡಿದ ಅವರು ಜೈಲಿನಲ್ಲಿ ಏನಾದರೂ ಸಮಸ್ಯೆಗಳಿವೆಯೇ, ಊಟ ಸರಿಯಿದೆಯೇ , ಮೂಲಭೂತ ಸೌಲಭ್ಯಗಳು ಸರಿಯಿವೆಯೇ , ಎಲ್ಲಾರನ್ನು ವಿಚಾರಣೆಗೆ ಕೋರ್ಟ್ ಗೆ ಹಾಜರು ಪಡಿಸುತ್ತಿದ್ದಾರೆಯೇ, ವಿಸಿ ಮೂಲಕ ವಿಚಾರಣೆ ನಡೆಯುತ್ತಿದೆಯೇ , ವಕೀಲರ ನೇಮಕ ಆಗಿದೆಯೇ ಎಂದು ವಿಚಾರಿಸಿದರು. ಈ ಕುರಿತಂತೆ ಯಾವುದೇ ಸಮಸ್ಯೆ ಇಲ್ಲವೆಂದು ಕಾರಾಗೃಹವಾಸಿಗಳು ತಿಳಿಸಿದರು.

ಜೈಲಿನಲ್ಲಿ ಅಳವಡಿಸಿರುವ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದರು. ಬೆಳಗಾವಿ ಕಾರಾಗೃಹದ ಸಹಾಯಕ ಅಧೀಕ್ಷಕ ಕೃಷ್ಣಮೂರ್ತಿ, ಕಾರವಾರ ಕಾರಾಗೃಹದ ಪ್ರಭಾರ ಅಧೀಕ್ಷಕ ಫಕೀರಪ್ಪ ತಮ್ಮಣ್ಣ ದಾಂಡೇನವರ್, ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಮೇಶ್ ಹೂಗಾರ್ ಉಪಸ್ಥಿತರಿದ್ದರು. ನಂತರ ಕಾರವಾರ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

https://www.vijayavani.net/let-venkatesh-protect-this-bridge ವೆಂಕಟೇಶನೇ ಕಾಪಾಡಲಿ ಈ ಸೇತುವೆ!

https://www.facebook.com/share/p/1G7Zc9SjmL/

Share This Article

ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information

ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…

ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್​ ಟ್ರಿಕ್​​ | Health Tips

ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…

ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips

ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…