ಮಾನವ ಕಳ್ಳ ಸಾಗಾಟ ತಡೆ ದಿನಾಚರಣೆ

gan
ಮಾನವ ಕಳ್ಳ ಸಾಗಾಟ ತಡೆ ದಿನಾಚರಣೆ ಪ್ರಯುಕ್ತ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ನ್ಯಾಯಾಧೀಶ ಅಬ್ದುಲ್ ರಹಿಮಾನ್ ಹುಸೇನ್ ಉದ್ಘಾಟಿಸಿದರು
Published on

ಗಂಗೊಳ್ಳಿ: ಮಾನವ ಕಳ್ಳ ಸಾಗಾಟ ತಡೆ ದಿನಾಚರಣೆ ಅಂಗವಾಗಿ ಕುಂದಾಪುರದ ಶ್ರೀ ರಕ್ತೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ. ಕಾರ್ಮಿಕ ಇಲಾಖೆ ಮತ್ತು ಬಿಸಿಎಂ ಇಲಾಖೆ ಆಶ್ರಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಹಿರಿಯ ನ್ಯಾಯಾಧೀಶ ಅಬ್ದುಲ್ ರಹಿಮಾನ್ ಹುಸೇನ್ ಉದ್ಘಾಟಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ಪ್ರಧಾನ ಸಿವಿಲ್ ನ್ಯಾಯಾಧೀಶೆ ಮಂಜುಳಾ ಬಿ, ಪ್ರೊಬೆಷನರಿ ಡಿವೈಎಸ್‌ಪಿ ಗೀತಾ ಪಾಟೀಲ್, ವಕೀಲರ ಸಂಘ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ, ಕುಂದಾಪುರ ಪೊಲೀಸ್ ಇನ್‌ಸ್ಪೆಕ್ಟರ್ ನಂದಕುಮಾರ, ಸಹಾಯಕ ಸರ್ಕಾರಿ ಅಭಿಯೋಜಕ ಉದಯ್ ಕುಮಾರ್ ಬಿ.ಎ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ಚಂದ್ರ ಶೆಟ್ಟಿ ಗಿಳಿಯಾರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಕೋಟ್ಯಾನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ, ಕಾರ್ಮಿಕ ನಿರೀಕ್ಷಕ ವಿಜೇಂದ್ರ ಉಪಸ್ಥಿತರಿದ್ದರು. ಎಎಸ್‌ಐ ಆನಂದ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ರಮೇಶ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net