ವಿದ್ಯೆಯೊಂದಿಗೆ ಇರಲಿ ಮಾನವೀಯ ಮೌಲ್ಯ: ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ

Bel_swamiji-1
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ವಿದ್ಯಾರ್ಥಿಗಳು ವಿದ್ಯೆಯ ಜತೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಹಣ, ಉದ್ಯೋಗ, ಆಸ್ತಿ, ಕೀತಿ ಯಾವುದೂ ಶಾಶ್ವತವಲ್ಲ. ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ವಿನಯ, ಪರೋಪಕಾರ, ಕರುಣೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 733 ವಿದ್ಯಾರ್ಥಿಗಳಿಗೆ 20,29,000 ರೂ. ವಿದ್ಯಾರ್ಥಿ ಪ್ರೋತ್ಸಾಹಧನವನ್ನು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸ್ಮಾರಕ ಟ್ರಸ್ಟ್ ವತಿಯಿಂದ ವಿತರಿಸಿ ಆಶೀರ್ವಚನ ನೀಡಿದರು.

ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಸ್ವಾಗತಿಸಿದರು. ಕೆ.ರಾಜವರ್ಮ ಬಳ್ಳಾಲ್, ಡಾ.ಜೀವಂಧರ ಬಳ್ಳಾಲ್, ಕೆ.ಪ್ರಸನ್ನ ಕುಮಾರ್, ಪ್ರೇಮ್ ಕುಮಾರ್ ಹೊಸ್ಮಾರು, ವಿಜಯಾ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಎಂ.ಜಿನರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬಸದಿಯಲ್ಲಿ 24 ತೀಥರ್ಂಕರರ ಆರಾಧನೆ ಮತ್ತು ವಿಶೇಷ ಪೂಜೆ ನಡೆಯಿತು. ಶಿಕ್ಷಕ ಧರಣೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net