ಓದಿನ ಜತೆ ಮಾನವೀಯ ಮೌಲ್ಯ ಅಗತ್ಯ

kota (8)
Published on

ಕೋಟ: ಪದವಿ ಪೂರ್ವ ಶಿಕ್ಷಣದಲ್ಲಿ ದ್ವಿತೀಯ ಪಿಯುಸಿ ಒಂದು ಮಹತ್ತರ ಟ್ಟ. ವಿದ್ಯಾರ್ಥಿಗಳು ಧೃತಿಗೆಡದೆ ಸಂಯಮದಿಂದ ಅಧ್ಯಯನ ನಡೆಸಬೇಕು. ಓದಿನೊಂದಿಗೆ ಜೀವನದಲ್ಲಿ ವಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಉತ್ತಮ ಸಂಸ್ಕಾರ ಕಲಿಯುವುದರ ಮೂಲಕ ಸವಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು ಎಂದು ಸಾಂಸ್ಕೃತಿಕ ಚಿಂತಕ ದಾಮೋದರ ಶರ್ಮ ಬಾರ್ಕೂರು ಹೇಳಿದರು.

ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೋಟ ವಿದ್ಯಾಸಂ ಅಧ್ಯಕ್ಷ ಸಿಎ ಪಿ.ಪ್ರಭಾಕರ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಜಗದೀಶ ನಾವಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪನ್ಯಾಸಕ ಸಂಜೀವ ಜಿ.ವಂದಿಸಿದರು. ಶಿವಪ್ರಸಾದ ಶೆಟ್ಟಿಗಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net