25.7 C
Bangalore
Sunday, December 15, 2019

ನಿವೇಶನ ನೀಡಲು ಮೀನಮೇಷ

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ ಹಾಕುವುದು ಒಳ್ಳೆಯದು ಎಂದು ಶಾಸಕ ಟಿ.ಡಿ.ರಾಜೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ತಾಪಂ ಸಭಾಂಗಣದಲ್ಲಿ 2ನೇ ತ್ರೖೆಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕು ಕಚೇರಿ ಅಧಿಕಾರಿಗಳು ಆದಾಯ, ಜಾತಿ ದೃಢೀಕರಣ ನೀಡಲು ಸತಾಯಿಸುತ್ತಿದ್ದಾರೆ. ಮೇಲಧಿಕಾರಿಗಳಿಗೆ ತಾಲೂಕಿನ ಸರಿಯಾದ ವರದಿ ನೀಡುತ್ತಿಲ್ಲ. ಎಲ್ಲ ಕಾರ್ಯದಲ್ಲೂ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ನವೀನ್​ಕುಮಾರ್ ಮಾತನಾಡಿ, ಕಿಗ್ಗಾ ನಾಡಕಚೇರಿ ಮಹಿಳಾ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಸಣ್ಣ ತಪ್ಪನ್ನು ದೊಡ್ಡದು ಮಾಡಲು ಹೊರಟ ಅಧಿಕಾರಿಗಳ ಧೋರಣೆ ಸರಿಯಲ್ಲ ಎಂದರು.

ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ಮಾತನಾಡಿ, ಅತಿವೃಷ್ಟಿಯಿಂದ ಹಲವು ತಾಲೂಕಿನಲ್ಲಿ 79ಹೆಕ್ಟೇರ್ ಬೆಳೆ ನಾಶವಾಗಿದೆ. 53 ಹೆಕ್ಟೇರ್ ಭತ್ತದ ಗದ್ದೆಯಲ್ಲಿ ಮರಳು ಮತ್ತು ಮಣ್ಣು ತುಂಬಿದೆ. ಬೆಳೆ ಹಾನಿ ಸಮೀಕ್ಷೆ ಮಾಡಿದ್ದು, 192 ಕೃಷಿಕರಿಂದ ಅರ್ಜಿ ಸ್ವೀಕರಿಸಲಾಗಿದೆ. ಪರಿಶಿಷ್ಟರಿಗೆ ಟಾರ್ಪಲ್ ನೀಡಲು ಬೇಡಿಕೆ ಸಲ್ಲಿಸಿದ್ದು, ಅನುದಾನ ಬಂದ ಬಳಿಕ ಅವರಿಗೆ ನೀಡಲಾಗುವುದು ಎಂದರು.

ಆರೋಗ್ಯ ಇಲಾಖೆ ಮುಖ್ಯ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾತನಾಡಿ, ಆಂಬುಲೆನ್ಸ್ ಸುಸ್ಥಿತಿಯಲ್ಲಿದೆ. ಆಸ್ಪತ್ರೆಯನ್ನು 100 ಹಾಸಿಗೆಯುಳ್ಳ ಸುಸಜ್ಜಿತ ಅಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಿದರೆ ಉತ್ತಮ ವೈದ್ಯರ ತಂಡ ಹಾಗೂ ಡಯಾಲಿಸಿಸ್ ಕೇಂದ್ರ ತೆರೆಯಬಹುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ಜಯಶೀಲಾ, ತಾಲೂಕಿನಲ್ಲಿ ದಂತ ವೈದ್ಯರ ಕೊರತೆ ಇದೆ. ಆದಷ್ಟು ಬೇಗ ವೈದ್ಯರನ್ನು ನಿಯೋಜಿಸಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ಜಿಪಂ ಸದಸ್ಯ ಬಿ.ಶಿವಶಂಕರ್ ಮಾತನಾಡಿ, ಹಾವು, ನಾಯಿ ಕಡಿತ, ಮಂಗನ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆಗಳಿಗೆ ತುರ್ತು ಜೌಷಧವನ್ನು ಆಸ್ಪತ್ರೆಯಲ್ಲಿ ದಾಸ್ತಾನು ಇಡಬೇಕು. ಔಷಧ ಇರದಿದ್ದರೆ ಮೆಲಧಿಕಾರಿಗೆ ವರದಿ ಮಾಡಿ ಕೂಡಲೇ ತರಿಸಿಕೊಳ್ಳಬೇಕು ಎಂದರು. ಶಾಸಕ ರಾಜೇಗೌಡ ಮಾತನಾಡಿ, ಅನುಪಾಲನಾ ವರದಿಯಲ್ಲಿ ಎಲ್ಲ ಅಧಿಕಾರಿಗಳೂ ಸರಿಯಾಗಿ ಮಾಹಿತಿ ನೀಡಬೇಕು. ಆಗ ಇಲ್ಲಿರುವ ಸಮಸ್ಯೆಗಳು, ವಾಸ್ತವ ಚಿತ್ರಣ ಜನಪ್ರತಿನಿಧಿಗಳಿಗೆ ಅರ್ಥವಾಗುತ್ತದೆ. ಆಂಬುಲೆನ್ಸ್ 24 ತಾಸು ಅಸ್ಪತ್ರೆಯಲ್ಲಿ ಇರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಿ.ಶಿವಶಂಕರ್ ಮಾತನಾಡಿ, ಬೇಗಾರು ಗ್ರಾಪಂ ವ್ಯಾಪ್ತಿಯ ತಾರೊಳ್ಳಿಕೂಡಿಗೆಯ 10 ಮನೆಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ನೀಡಿಲ್ಲ.ಆದರೆ ಕರೆಂಟ್ ಬಿಲ್ ಬಂದಿದೆ. ಇದರ ಕುರಿತು ಮೆಸ್ಕಾಂನ ಹಿರಿಯ ಅಭಿಯಂತರಾದ ಮಂಜುನಾಥ್ ಅವರ ಗಮನ ಸೆಳೆದರು. ಮಂಜುನಾಥ್ ಮಾತನಾಡಿ ಈಗಾಗಲೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಆದರೆ ವಿದ್ಯುತ್ ನೀಡುವುದು ವಿಳಂಬವಾಗಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.

ರ್ಕಾರಕ್ಕೆ ಸರಿಯಾದ ಮಾಹಿತಿ ಕೊಡಿ: ರಾಷ್ಟ್ರೀಯ ಹೆದ್ದಾರಿ-169ರ ರಸ್ತೆ ಹಾಗೂ ಸೇತುವೆ ಅಭಿವೃದ್ಧಿಗೆ ವನ್ಯಜೀವಿ ವಿಭಾಗ ಹಾಗೂ ಅರಣ್ಯ ಇಲಾಖೆ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದ ಕಾರಣ ಕೆಲಸಕ್ಕೆ ತೊಡಕಾಗಿದೆ. ಇಲಾಖೆಯವರು ಕಾನೂನು ಹೇಳುತ್ತಾ ಕಾಲ ಕಳೆಯಬಾರದು. ಅವರು ಮನುಷ್ಯತ್ವ ಮರೆತರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ.ಶೃಂಗೇರಿ ಪ್ರವಾಸಿಕೇಂದ್ರ. ಕೆರೆಕಟ್ಟೆಯ ಸೇತುವೆ ಹಾಗೂ ರಸ್ತೆ ನಿರ್ಮಾಣ ಕೂಡಲೇ ಆಗಬೇಕಿದೆ.ಈ ಕುರಿತು ಅಧಿಕಾರಿಗಳು ಸರಕಾರಕ್ಕೆ ವರದಿ ಸಲ್ಲಿಸಿದರೆ ವಿಧಾನಸಭೆಯಲ್ಲಿ ಈ ಕುರಿತು ರ್ಚಚಿಸಿ ಪರಿಹಾರ ಕಂಡುಕೊಳ್ಳಲು ಸುಲಭವಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಸಭೆಯಲ್ಲಿ ಅಧಿಕಾರಿಗಳಿಗೆ ಮನವಿ ಮಾಡಿದರು.

ಹೆದ್ದಾರಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಅಡ್ಡಿ: ಕೆರೆಕಟ್ಟೆ ರಾಷ್ಟ್ರೀಯ ಹೆದ್ದಾರಿಯನ್ನು ಅರಣ್ಯ ಮತ್ತು ವನ್ಯಜೀವಿ ವಿಭಾಗದ ಇಲಾಖೆಯವರು ಗುತ್ತಿಗೆ ತೆಗೆದುಕೊಂಡಂತೆ ವರ್ತಿಸುತ್ತಿದ್ದಾರೆ. ಅವರು ಅಕೇಶಿಯಾ ಮರವನ್ನು ಕಡೆಯಬಹುದು. ಜೆಸಿಬಿ ಯಂತ್ರ ಬಳಸಬಹುದು. ಎರಡು ಇಲಾಖೆಯವರು ಮಾಡುವ ಕಾರ್ಯಗಳ ಕುರಿತು ಮಾಹಿತಿ ಹಕ್ಕಿನಲ್ಲಿ ತೆಗೆದರೆ ಅವರ ಬಣ್ಣ ಬಯಲಾಗುತ್ತದೆ ಎಂದು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎ.ಎಸ್.ನಯನ ಹೇಳಿದರು. ಬಿ.ಶಿವಶಂಕರ್ ಮಾತನಾಡಿ, 48 ಕೋಟಿ ರೂ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಹಾಗೂ ರಸ್ತೆ ಅಭಿವೃದ್ಧಿಗೆ ಸರ್ಕಾರದ ಅನುದಾನ ಬಂದಿದೆ. ಕಾಮಗಾರಿಗೆ ಮಣ್ಣು, ಜಲ್ಲಿ, ಸಿಮೆಂಟ್ ಇಲ್ಲಿ ಹಾಕುವ ಅವಕಾಶವಿಲ್ಲ. ನೀರು ಕೂಡಾ ಉಪಯೋಗಿಸುವಂತಿಲ್ಲ ಎಂದು ಇಲಾಖೆಯವರು ತಗಾದೆ ತೆಗೆಯುತ್ತಿದ್ದಾರೆ ಎಂದು ಆರೋಪಿಸಿದರು. ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಅಧಿಕಾರಿಗಳು ಮಾನವೀಯತೆಯಿಂದ ವರ್ತಿಸಿದಾಗ ಮಾತ್ರ ಜನಪ್ರತಿನಿಗಳು ಅಭಿವೃದ್ಧಿ ಕಾರ್ಯ ಮಾಡಬಹುದು.ಈ ನಿಟ್ಟಿನಲ್ಲಿ ಅಕಾರಿಗಳು ಕೂಡಲೇ ಕಾರ್ಯತತ್ವರಾಗಬೇಕು.ಅದಕ್ಕೆ ಕ್ಷೇತ್ರದ ಶಾಸಕನಾಗಿ ಸಹಕಾರ ನೀಡುತ್ತೇನೆ ಎಂದರು.

ತಾಪಂ ಅಧ್ಯಕ್ಷೆ ಜಯಶೀಲಾ ಚಂದ್ರಶೇಖರ್, ಉಪಾಧ್ಯಕ್ಷೆ ಚಂದ್ರಮತಿ ತಿಮ್ಮಪ್ಪ, ಜಿಪಂ ಸದಸ್ಯರಾದ ಶಿಲ್ಪಾ ರವಿ, ಬಿ.ಶಿವಶಂಕರ್, ಇಒ ಸಿದ್ಧಲಿಂಗಯ್ಯ ಹಾಜರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...