More

    ವಿದ್ಯೆಯೊಂದಿಗೆ ಮಾನವೀಯ ಗುಣವೂ ಮುಖ್ಯ

    ಕಡೂರು: ವಿದ್ಯಾರ್ಥಿಗಳು ಉತ್ತಮ ಅಂಕಗಳಿಕೆ ಜತೆಗೆ ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಕನ್ನಡ ಸಾಹಿತ್ಯ ಹಾಗೂ ಪರಂಪರೆ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ನಾಡು-ನುಡಿ ಬಗ್ಗೆ ಗೌರವ ಭಾವನೆ ಹೊಂದಬೇಕಿದೆ ಎಂದು ಪುರಸಭೆ ಸದಸ್ಯ ಭಂಡಾರಿ ಶ್ರೀನಿವಾಸ್ ಹೇಳಿದರು.
    ಪಟ್ಟಣದ ಕನ್ನಡ ಭವನದಲ್ಲಿ ತಾಲೂಕು ಕಸಾಪದಿಂದ ಶನಿವಾರ ಏರ್ಪಡಿಸಿದ್ದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮನುಷ್ಯ ಉನ್ನತ ಸಾಧನೆ ಮಾಡಲು ಶಿಕ್ಷಣ ಅಗತ್ಯ. ಇದಕ್ಕೆ ಗುರುಗಳ ಪ್ರೋತ್ಸಾಹ ಮುಖ್ಯ. ಶಿಕ್ಷಣದಿಂದ ಯಾರೂ ವಂಚಿತರಾಗಬಾದು ಎಂಬ ಉದ್ದೇಶಿಂದ ಸರ್ಕಾರ ಹಲವು ಕಾರ್ಯಕ್ರಮ ರೂಪಿಸಿದೆ. ಇತರೆ ವಿಷಯಗಳ ಪೈಪೋಟಿ ನಡುವೆಯೂ ಕನ್ನಡ ವಿಷಯದಲ್ಲಿ ಪೂರ್ಣ ಪ್ರಮಾಣದ ಅಂಕಗಳಿಸಿರುವುದು ಹೆಮ್ಮೆಯ ಸಂಗತಿ. ಕಸಾಪ ಘಟಕಗಳು ಮಕ್ಕಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನೀಯ ಎಂದರು.
    ಕನ್ನಡ ಸಾಹಿತ್ಯಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ನೀಡುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ನಮ್ಮ ಸಾಹಿತಿಗಳಿಗೆ ಸಲ್ಲುತ್ತದೆ. ಸಾಹಿತಿಗಳು ಸಮಾಜದ ಓರೆಕೋರೆಗಳನ್ನು ತಿದ್ದುವ ಮೂಲಕ ಸಮಾಜಮುಖಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
    ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಪರಿಷತ್‌ನಿಂದ ಮಕ್ಕಳ ಪ್ರತಿಭೆ ಗುರುತಿಸಿ ಪುರಸ್ಕರಿಸುವ ಕಾರ್ಯ ಮಾಡಲಾಗುತ್ತಿದೆ. ಜತೆಗೆ ಗುರುಗಳನ್ನು ಗೌರವಿಸುವ ಪದ್ಧತಿ ಮುಂದುವರಿಸಲಾಗುತ್ತಿದೆ. ಕಸಾಪದ ಎಲ್ಲ ವಿಭಾಗದ ಘಟಕಗಳು ನಾಡು-ನುಡಿ ಸೇವೆ ಜತೆಗೆ ಕನ್ನಡತನವನ್ನು ಗಟ್ಟಿಗೊಳಿಸಲು ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದೆ ಎಂದರು.
    ನಿವೃತ್ತ ಮುಖ್ಯಶಿಕ್ಷಕರಾದ ಎಸ್.ವಿ.ಮರುಳಸಿದ್ದಪ್ಪ, ಎಚ್.ಮಲ್ಲಮ್ಮ, ನಿಂಗಪ್ಪ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ , ಕಸಾಪ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸವಿತಾ ಸತ್ಯನಾರಾಯಣ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿದ್ಯಾಲಯದ ಸಂಚಾಲಕಿ ಪದ್ಮಕ್ಕ, ಲತಾ ರಾಜಶೇಖರ್, ಬಿ.ಚಂದ್ರುಶೇಖರ್, ಪ್ರಸನ್ನ, ಕುಪ್ಪಾಳು ಶಾಂತಮೂರ್ತಿ, ವಡೇರಹಳ್ಳಿ ಅಶೋಕ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts