More

    ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಲಿ

    ಬೆಳಗಾವಿ: ಕಾನೂನು ವೃತ್ತಿಯು ಅತ್ಯಂತ ಶ್ರೇಷ್ಠ ಹಾಗೂ ಗೌರವಾನ್ವಿತವಾಗಿದ್ದು, ನೂರೆಂಟು ಅವಕಾಶಗಳಿವೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನಕ್ಕೆ ಏರಬೇಕು ಎಂದು ಬೆಳಗಾವಿಯ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ, ಸಿಜೆಎಂ ರಾಚೋಟಿ ಶಿರೂರ ಹೇಳಿದರು.

    ನಗರದ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಕಾಲೇಜು ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ಏರ್ಪಡಿಸಿದ್ದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಒಕ್ಕೂಟ, ಉಚಿತ ಕಾನೂನು ಸೇವೆ ಹಾಗೂ ಕ್ರೀಡಾ ಚಟುವಟಿಕೆ ಉದ್ಘಾಟಿಸಿ ಅವರು ಮಾತನಾಡಿದರು.ಕಾನೂನು ಪದವೀಧರರಿಗೆ ಲಭ್ಯವಿರುವ ವಿವಿಧ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಬೆಲ್ಲದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಆರ್.ಬಿ.ಬೆಲ್ಲದ ಮಾತನಾಡಿ, ವಿದ್ಯಾರ್ಥಿಗಳು ಎಲ್ಲ ಅವಕಾಶ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. 2023ನೇ ಸಾಲಿನಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ನೇಮಕಗೊಂಡ ಕವಿತಾ ಹಿರೇಮಠ, ಗೋಪಿಕಾ ಹೊಸಮನಿ ಮತ್ತು ಅಕ್ಷಯ ವಾಲಿ ಅವರನ್ನು ಸನ್ಮಾನಿಸಲಾಯಿತು.

    ಪ್ರೊ.ಉಮಾ ಹಿರೇಮಠ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು. ಸುನಂದಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಪ್ರಾಚಾರ್ಯ ಡಾ.ಬಿ. ಜಯಸಿಂಹ ಸ್ವಾಗತಿಸಿ, ಪರಿಚಯಿಸಿದರು.

    ಬಿಎ ಎಲ್‌ಎಲ್‌ಬಿ ವಿದ್ಯಾರ್ಥಿಗಳಾದ ಅನುಷಾ ಮತ್ತು ಆಕಾಶ್ ನಿರೂಪಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ವಿನಯ ಪೂಜಾರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts