More

  ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿದ್ದ ಶರಣರು

  ಸಿರವಾರ: ಶಿವಯೋಗಿ ಸಿದ್ಧರಾಮೇಶ್ವರ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಸಿದ್ಧರಾಮೇಶ್ವರ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಪಂ ಮಾಜಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು ಹೇಳಿದರು.

  ಅತ್ತನೂರಿನಲ್ಲಿ ಭೋವಿ ಸಮುದಾಯದಿಂದ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಶಿವಯೋಗಿ ಸಿದ್ಧರಾಮೇಶ್ವರ ಅವರು 12ನೇ ಶತಮಾನದಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಕಾಯಕ ಮಹತ್ವವನ್ನು ಜಗತ್ತಿಗೆ ಸಾರಿದ ಮಹನೀಯರಾಗಿದ್ದಾರೆ. ಮಾನವೀಯ ಮೌಲ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದರು ಎಂದು ಹೇಳಿದರು.

  ಪ್ರಮುಖರಾದ ಮಂಜುನಾಥ ನಾಯಕ, ಅಜಯ್, ನವೀನ್ ಪಾಟೀಲ್, ರಂಗನಾಥ ಭೋವಿ, ಭೀಮರಾಯ ಭೋವಿ, ಬಸವರಾಜ ಭೋವಿ, ಮುದುಕಪ್ಪ ಭೋವಿ, ಅಯ್ಯಪ್ಪ, ಹನ್ಮಂತ ಭೋವಿ, ಶರಣಬಸವ ಭೋವಿ, ಹಬೀಬ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts