More

    ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ

    ಹುಣಸೂರು: ಪ್ರತಿಭೆ ಮತ್ತು ಯಶಸ್ಸು ಯಾರೊಬ್ಬರ ಸ್ವತ್ತಲ್ಲ. ಸತತ ಪರಿಶ್ರಮದಿಂದ ಮಾತ್ರ ಯಶಸ್ಸಿನತ್ತ ಸಾಗಲು ಸಾಧ್ಯ ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾಅಮರನಾಥ್ ಅಭಿಪ್ರಾಯಪಟ್ಟರು.

    ತಾಲೂಕಿನ ರತ್ನಪುರಿ ಗ್ರಾಮದ ವಿಶ್ವಶಾಂತಿ ಶಿಕ್ಷಣ ಸಂಸ್ಥೆ ಪ್ರಥಮದರ್ಜೆ ಕಾಲೇಜಿನ ವತಿಯಿಂದ ನಂಜಾಪುರದಲ್ಲಿ ಮಂಗಳವಾರ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ಕನಸುಗಳನ್ನು ಹೊತ್ತು ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಪರಿಶ್ರಮದಿಂದ ಸಾಧನೆ ಮಾಡಿ ಯಶಸ್ಸು ಸಾಧಿಸಬೇಕು. ಯಶಸ್ಸು ಎಂಬುದು ಯಾರೋ ಒಬ್ಬರ ಸ್ವತ್ತಲ್ಲ. ಪ್ರಯತ್ನ ಇದ್ದರೆ ಫಲವನ್ನು ಪಡೆಯಬಹುದು. ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಿಗೆ ಭವಿಷ್ಯದ ಜೀವನದ ಕುರಿತಾದ ವಾಸ್ತವಾಂಶಗಳನ್ನು ತಿಳಿಸುವ ವೇದಿಕೆಯಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕನ್ನಡ ಉಪನ್ಯಾಸಕ ಎಂ.ರವಿ ಮಾತನಾಡಿ, ವಿದ್ಯಾರ್ಥಿಗಳು ಕೆಟ್ಟ ಚಟಗಳಿಗೆ ದಾಸರಾಗದೆ ಶಿಸ್ತಿನ ಜೀವನ ನಡೆಸಬೇಕು. ಶ್ರಮದಾನ ಮಾಡಿದರೆ ಸಾರ್ವಜನಿಕ ಜೀವನದಲ್ಲಿ ರಾಷ್ಟ್ರಸೇವೆ ಮಾಡಿದಂತೆ. ಪಾಲಕರು ಮಕ್ಕಳ ಸಾಮರ್ಥ್ಯ ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವ ಮೂಲಕ ಕೆಟ್ಟದಾರಿಗೆ ಹೋಗದಂತೆ ಜಾಗ್ರತೆ ವಹಿಸಬೇಕು ಎಂದರು.

    ಪ್ರಾಂಶುಪಾಲ ನಾಗೇಶ್, ಸತ್ಕಾರ ಅಭಿವೃದ್ದಿ ಸಂಸ್ಥೆಯ ಉಪಾಧ್ಯಕ್ಷ ಮನುಕುಮಾರ್, ಶಿಬಿರಾಧಿಕಾರಿ ಸಿ.ಎಸ್.ನಾಗೇಶ್, ಗ್ರಾಪಂ ಸದಸ್ಯರಾದ ಶಿವಕುಮಾರ್, ಕೆಂಪರಾಜು, ಕಿತ್ತೂರುರಾಣಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಮಾತನಾಡಿದರು. ಮುಖಂಡರಾದ ಕೃಷ್ಣಶೆಟ್ಟಿ, ನಂಜುಂಡಸ್ವಾಮಿ, ಮುಖ್ಯ ಶಿಕ್ಷಕ ಚಂದ್ರಶೇಖರ್, ಉಪನ್ಯಾಸಕರಾದ ಅಂಜಲಿ, ಸುಧಾಕರ್, ಪ್ರಥಮ ದರ್ಜೆ ಸಹಾಯಕ ಮಲ್ಲಿಕಾರ್ಜನಸ್ವಾಮಿ ಮತ್ತು ಶಿಬಿರಾರ್ಥಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts