hunasuru, shivaratri, ಹುಣಸೂರು, ಶಿವನಾಮ ಜಪ

ಹುಣಸೂರು: ಮಹಾಶಿವರಾತ್ರಿ ಅಂಗವಾಗಿ ನಗರದ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ರಾತ್ರಿ ವಿಶೇಷ ಪೂಜೆ ನಡೆಯಿತು.
ಪಟ್ಟಣದ ಬ್ರಾಹ್ಮಣರ ಬಡಾವಣೆಯ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಅರ್ಚಕ ಶ್ರೀಹರಿ ನೇತೃತ್ವದಲ್ಲಿ ಮೃತ್ಯುಂಜಯ ಹೋಮ ನಡೆಯಿತು. ಅರ್ಚಕ ಗೋಪಾಲ್ ನೇತೃತ್ವದಲ್ಲಿ ಮೈಸೂರು ರಸ್ತೆಯ ಶ್ರೀ ಮಂಜುನಾಥಸ್ವಾಮಿ, ಸುಬ್ರಹ್ಮಣ್ಯೇಶ್ವರಸ್ವಾಮಿ, ಆಂಜನೇಯಸ್ವಾಮಿ, ಈಶ್ವರ ಹಾಗೂ ಶ್ರೀಕೃಷ್ಣ ಮತ್ತು ನವಗ್ರಹ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು.