More

    ಬಾಕಿ ಕಾಮಗಾರಿ ಬೇಗ ಪೂರ್ಣಗೊಳಿಸಿ

    ಕೂಡ್ಲಿಗಿ: ಕೆಕೆಆರ್‌ಡಿಬಿ, ಜಿಲ್ಲಾ ಖನಿಜ ನಿಧಿ ಸೇರಿದಂತೆ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸೂಚನೆ ನೀಡಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ತಾಲೂಕಿನ ಅನೇಕ ಕಡೆ ಸರ್ಕಾರಿ ಶಾಲೆ ಕೊಠಡಿಗಳು ದುಸ್ಥಿತಿಯಲ್ಲಿದ್ದು, ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ದುರಸ್ತಿಗೆ ಅಗತ್ಯ ಅನುದಾನ ನೀಡಿದೆ. ಕೆಲ ಗ್ರಾಮಗಳ ರಸ್ತೆಗಳು ಕೂಡ ಹಾಳಾಗಿದ್ದು, ಸರಿಪಡಿಸಲು ಅನುದಾನ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ನಿರ್ವಹಿಸಿ, ಫೆಬ್ರವರಿ ವೇಳೆಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

    ಪಟ್ಟಣದಲ್ಲಿ ತಾಯಿ ಮತ್ತು ಮಕ್ಕಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಿದ್ದು, ಪಟ್ಟಣದ ಹಳೇ ಆಸ್ಪತ್ರೆ ನಿವೇಶನ ಸೂಕ್ತವಾಗಿದೆ. 25 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸಚಿವರು ಸಕಾರಾತ್ಮಕ ಸ್ಪಂದಿಸಿದ್ದಾರೆ. ಮುಂದಿನ ಬಜೆಟ್‌ನಲ್ಲಿ ಕ್ಷೇತ್ರದ ವಿವಿಧ ಯೋಜನೆಗಳಿಗೆ ಅನುದಾನದ ಬೇಡಿಕೆ ಇಟ್ಟಿದ್ದು, ಸರ್ಕಾರ ಸಮ್ಮತಿಸಿದೆ. ಅಧಿಕಾರಿಗಳು ಸಹ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕೋರಿದರು.

    ಟಿಎಚ್‌ಒ ಎಸ್.ಪಿ.ಪ್ರದೀಪ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಡಿ.ವೆಂಕಟರಮಣ, ಜಿಪಂ ಇಲಾಖೆ ಎಇಇ ಮಲ್ಲಿಕಾರ್ಜುನ, ಪಪಂ ಮುಖ್ಯಾಧಿಕಾರಿ ಫಿರೋಜ್ ಖಾನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts