More

    ರಾಮಮಂದಿರ ಉದ್ಘಾಟನೆ ಬಿಜೆಪಿಯ ಪಿತೂರಿ: ಮಲ್ಲಿಕಾರ್ಜುನ ಖರ್ಗೆ

    ನವದೆಹಲಿ: ಜನವರಿ 22ರಂದು ಜರುಗಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಇದು ಬಿಜೆಪಿಯ ಪಿತೂರಿಯೇ ಹೊರತು ಬೇರೇನೂ ಅಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕ್ರಮವನ್ನು ತಿರಸ್ಕರಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಹಿಟ್​ಮ್ಯಾನ್​ ​

    ರಾಮನ ಮೇಲೆ ನಂಬಿಕೆ ಇರುವವರು ಯಾವಾಗ ಬೇಕಾದರೂ ಅಯೋಧ್ಯೆಗೆ ಭೇಟಿ ನೀಡಬಹುದಾಗಿದೆ. ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನಮ್ನ ಉದ್ದೇಶವಾಗಿಲ್ಲ. ಇದು ರಾಜಕೀಯ ಪ್ರೇರಿತವಾಗಿದ್ದು, ದೇಶದಲ್ಲಿ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು ಪ್ರಧಾನಿ ಮೋದಿ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ಧಾರೆ.

    ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಅವರು ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಅವರನ್ನು ಹಿಂದೂ ವಿರೋಧಿ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts