ಹುಬ್ಬಳ್ಳಿ: ನಿನ್ನೆಯಷ್ಟೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರ ಬೆನ್ನಿಗೇ ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದ್ದು, ಪರಾರಿಯಾದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪದ ಸುಮಂಗಲಾ ಸಾವಿಗೀಡಾದ ಮಹಿಳೆ. ನಿನ್ನೆ ಈಕೆಯ ಶವ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಈ ಕುರಿತು ಅನುಮಾನ ವ್ಯಕ್ತಪಡಿಸಿರುವ ಆಕೆಯ ಕುಟುಂಬಸ್ಥರು ಅವಳ ಪತಿ ಹಾಗೂ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ.
ಐದು ವರ್ಷಗಳ ಹಿಂದೆ ಸುಮಂಗಲಾ- ಪ್ರವೀಣ್ ತಿಪ್ಪಣ್ಣವರ್ ಮದುವೆ ಆಗಿತ್ತು. ಮದುವೆ ಬಳಿಕ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದಿರುವ ಸುಮಂಗಲಾ ಕುಟುಂಬಸ್ಥರು, ಆಕೆಯ ಪತಿ ಮತ್ತಿತರರ ವಿರುದ್ಧ ದೂರು ನೀಡಿದ್ದಾರೆ. ಇತ್ತ ಸುಮಂಗಲಾ ಸಾವಿನ ಬೆನ್ನಲ್ಲೇ ಆಕೆಯ ಪತಿ ಹಾಗೂ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಕೋಚಿಂಗ್ ವಿದ್ಯಾರ್ಥಿಗಳ ಸುside ಬಗ್ಗೆಯೂ ನಡೆಯಿತು ಪಿಎಚ್ಡಿ; ಅಧ್ಯಯನದಲ್ಲಿ ಕಂಡುಬಂದ ಅಂಶಗಳಿವು!