

ಮುಂಡಗೋಡ: ಪತ್ನಿಯ ತವರು ಮನೆಯ ಮುಂದೆ ಪತಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಂದೂರ ಕೊಪ್ಪ ಗ್ರಾಮದಲ್ಲಿ ಭಾನುವಾರ ನಡೆದಿದೆ.
ತಾಲೂಕಿನ ನಂದಿಗಟ್ಟ ಗ್ರಾಮದ ಅರವಿಂದ ಚಿತ್ತರಗಿ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇಂದೂರ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿರುವ ಪತ್ನಿ ಮನೆಗೆ ತೆರಳಿದ ಈತ ಮನೆಯ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಾಲೂಕಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.