ರಾತ್ರಿ ಗಾಢ ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ದು ಪರಾರಿಯಾಗಿರುವ ಪತಿ: ಸಾವಿನ ಹಿಂದಿದೆಯಾ ಸಂಶಯ?

ಮಂಡ್ಯ: ನಿನ್ನೆ(ಭಾನುವಾರ) ರಾತ್ರಿ ಗಾಢ ನಿದ್ರೆಯಲ್ಲಿದ್ದ ಪತ್ನಿಯ ಕತ್ತು ಕೊಯ್ಡು ಪತಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಸೌಮ್ಯ (25) ಕೊಲೆಯಾದ ಮಹಿಳೆ. ಅನ್ಯ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತಿ ಕುಮಾರಸ್ವಾಮಿ ಹತ್ಯೆಗೈದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಕಿರುಗಾವಲು ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ಆರೋಪಿ ಪತಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *