ಪತ್ನಿಯ ಖಾಸಗಿ ಫೋಟೊ ಜತೆಗೆ ಮೊಬೈಲ್ ಸಂಖ್ಯೆ ನಮೂದಿಸಿ ಗೋಡೆಗೆ ಅಂಟಿಸಿದ ಪತಿ

poster agra
Published on

ಆಗ್ರಾ: ಹೆಂಡತಿಯ ಮೇಲಿನ ಸಿಟ್ಟಿಗೆ ಆಕೆಯ ಅಶ್ಲೀಲ ಪೋಸ್ಟರ್‌ಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಗೋಡೆಯ ಮೇಲೆ ಅಂಟಿಸಿರುವ ಅಸಹ್ಯಕರ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಕಮಲಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಮಹಿಳೆಯೊಬ್ಬರು ಪತಿಯ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದು, ಪತಿ ತನ್ನ ಮೇಲೆ ಹಲ್ಲೆ ನಡೆಸಿ ಬೇರೆಯವರಿಗೆ ಒಪ್ಪಿಸಿದ್ದಾನೆ. ನಾನು ಈ ಕೃತ್ಯವನ್ನು ವಿರೋಧಿಸಿದಾಗ ಆತ ನನ್ನ ಖಾಸಗಿ ಫೋಟೊಗಳನ್ನು ಸಾರ್ವಜನಿಕವಾಗಿ ಅಂಟಿಸಿದ್ದಾನೆ ಎಂದು ಆರೋಪಿಸಿದ್ದಾಳೆ.

ಸದ್ಯ, ಪೋಸ್ಟರ್​ ಅಂಟಿಸುತ್ತಿರುವ ವ್ಯಕ್ತಿಯೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಅದು ಈತನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ.ಈ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net