

ಸುಳ್ಯ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಪತಿಯು ಪತ್ನಿಗೆ ಚೂರಿಯಿಂದ ಇರಿದಿದ್ದಾನೆ. ವಿನೋಬ ನಗರದ ನಿವಾಸಿ ನವೀನ್ ಕುಮಾರ್ ಬಂಧಿತ ಆರೋಪಿ. ಶನಿವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು, ಆರೋಪಿಯು ಪತ್ನಿ ಅಶ್ವಿನಿಗೆ ಚೂರಿಯಿಂದ ಇರಿದಿದ್ದಾನೆ. ಅಶ್ವಿನಿ ತಪ್ಪಿಸಿಕೊಳ್ಳಲು ಯತ್ನಿಸಿದರೂ ಅವರ ಬೆನ್ನಿನ ಭಾಗಕ್ಕೆ ಚೂರಿ ತಾಗಿದೆ. ಗಾಯಾಳು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.