ಹೂವಿನಹಡಗಲಿ ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಹೂವಿನಹಡಗಲಿ: ಹೂವಿನಹಡಗಲಿ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳಿಂದ ಬುಧವಾರ ಪ್ರತಿಭಟನೆ ನಡೆಯಿತು.

ಕಸಾಪ ತಾಲೂಕು ಅಧ್ಯಕ್ಷ ಎಂ.ಪಿ.ಎಂ. ಮಂಜುನಾಥ ಮಾತನಾಡಿ, ಹೂವಿನಹಡಗಲಿ ತಾಲೂಕು ಭೌಗೋಳಿಕವಾಗಿ ವಿಸ್ತರಣೆ ಹೊಂದಿದೆ. ಶೈಕ್ಷಣಿಕ ಸಾಧನೆಯಲ್ಲಿ ಗಮನ ಸೆಳೆದಿದೆ. ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಎರಡು ದಶಕಗಳಿಂದ ಹೋರಾಟ ನಡೆಸಲಾಗುತ್ತಿದೆ. ಅಧಿಕಾರಕ್ಕಾಗಿ ಆನಂದ ಸಿಂಗ್ ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯಿಸುತ್ತಿದ್ದಾರೆ. ಬೇಡಿಕೆ ಈಡೇರಿಸದೆ ಇದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ಸಿಎಂ ಬಳಿ ನಿಯೋಗ ಹೋಗಲಾಗುವುದು ಎಂದರು.

ತಹಸೀಲ್ದಾರ್ ಕೆ.ರಾಘವೇಂದ್ರರಾವ್‌ಗೆ ಮನವಿ ಸಲ್ಲಿಸಲಾಯಿತು. ಎಐಟಿಯುಸಿ ಮುಖಂಡ ಶಾಂತರಾಜ ಜೈನ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಂ. ಪರಮೇಶ್ವರಪ್ಪ, ಪ್ರೆಸ್ ಕ್ಲಬ್ ಅಧ್ಯಕ್ಷ ಕೆ.ಅಯ್ಯನಗೌಡ, ಅಂಗನವಾಡಿ ೆಡರೇಷನ್ ಅಧ್ಯಕ್ಷೆ ಮಂಜುಳಾ, ಉಪನ್ಯಾಸಕ ಕೊಟ್ರಗೌಡ, ಬಿ.ಎಲ್.ಶ್ರೀಧರ್, ಛಾಯಾಗ್ರಾಹಕರ ಸಂಘದ ತಾಲೂಕು ಅಧ್ಯಕ್ಷ ಸಿದ್ದೇಶ, ಚುಸಾಪ ಅಧ್ಯಕ್ಷ ನಾಗರಾಜ್ ಮಲ್ಕಿ ಒಡೆಯರ್, ಮಲ್ಲಿಗೆ ಯೋಗ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೋಡಿಹಳ್ಳಿ ಕೊಟ್ರೇಶ, ತಾಪಂ ಸದಸ್ಯ ಜೆ.ಶಿವರಾಜ್, ಎಸ್.ಹಾಲೇಶ, ಆಟೋಚಾಲಕರ ಸಂಘದ ಅಧ್ಯಕ್ಷ ಶಂಶುದ್ದೀನ್, ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಅಜಿತ್, ರೈತ ಸಂಘ, ಹಸಿರು ಸೇನೆ ಅಧ್ಯಕ್ಷ ಅಂಚಿ ಮಂಜುನಾಥ ಇತರರಿದ್ದರು.

ಹೊಸಪೇಟೆ ಜಿಲ್ಲಾ ಕೇಂದ್ರದ ಹೋರಾಟ ಈಚೆಗೆ ಹುಟ್ಟಿಕೊಂಡಿದೆ. ಸ್ಥಳೀಯ ರಾಜಕೀಯ ನಾಯಕರ ಇಚ್ಛಾಶಕ್ತಿ ಕೊರೆತೆಯಿಂದ ಹೂವಿನಹಡಗಲಿ ತಾಲೂಕು ಸೌಕರ್ಯಗಳಿಂದ ವಂಚಿತವಾಗಿದೆ.
| ಎಂ.ಗಂಗಾಧರ ಅಧ್ಯಕ್ಷ, ರೈತ ಸಂಘದ ತಾಲೂಕು ಘಟಕ

Leave a Reply

Your email address will not be published. Required fields are marked *