More

    ಡಿಸೆಂಬರ್ ಅಂತ್ಯಕ್ಕೆ ಪಠ್ಯಕ್ರಮ ಮುಗಿಸಿ – ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಸಲಹೆ

    ಹೂವಿನಹಡಗಲಿ: ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪ್ರಮುಖ ಘಟ್ಟ. ಉತ್ತಮ ಫಲಿತಾಂಶ ಸುಧಾರಣೆಗಾಗಿ ಇಲಾಖೆ ಕಾರ್ಯಾಗಾರ ಹಮ್ಮಿಕೊಂಡಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ ಹೇಳಿದರು.

    ಮೊದಲಘಟ್ಟ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬಿಇಒ, ಬಿಆರ್‌ಸಿ ಕಚೇರಿ, ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಹಾಗೂ ಸಹ ಶಿಕ್ಷಕರ ಸಂಘ, ಇಂಗ್ಲಿಷ್, ಹಿಂದಿ ವಿಷಯ ಶಿಕ್ಷಕರ ವೇದಿಕೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ವಿಷಯ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಪ್ರತಿ ಶಿಕ್ಷಕರು ಡಿಸೆಂಬರ್ ಅಂತ್ಯಕ್ಕೆ ಪಠ್ಯಕ್ರಮ ಮುಗಿಸಬೇಕು. ಕಲಿಕೆಯಲ್ಲಿ ಹಿಂದೆ ಇರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು. ಎಸ್ಸೆಸ್ಸೆಲ್ಸಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕರ ಸಭೆ ಮಾಡಿ ಶೈಕ್ಷಣಿಕ ಪ್ರಗತಿ ಕುರಿತು ಮಾಹಿತಿ ನೀಡಬೇಕು. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್‌ಗೆ ಹೆಚ್ಚಿನ ಆದ್ಯತೆ ನೀಡಿ ಎಂದರು.

    ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಮಲ್ಲಿಕಾರ್ಜುನ ಮಾಹಿತಿ ಹಂಚಿಕೊಂಡರು. ಪ್ರಾಚಾರ್ಯ ಹಂಪಮ್ಮ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಪಿ.ಪ್ರಕಾಶ್, ಸಹಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ಬಡ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಶೇಖ್‌ಅಹಮದ್, ಶಿಕ್ಷಕ ಎಲ್.ಖಾದರ್ ಭಾಷಾ ಹಾಜರಿದ್ದರು. ಬಿಆರ್‌ಪಿ ಕಾಶಿ ವಿಶ್ವನಾಥ, ಶಿಕ್ಷಕರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts