More

    ಕಾರ್ಮಿಕರಿಗೆ 10 ಸಾವಿರ ರೂ. ಪರಿಹಾರ ವಿತರಿಸಲಿ: ಸರ್ಕಾರಕ್ಕೆ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಒತ್ತಾಯ

    ಹೂವಿನಹಡಗಲಿ: ಮಹಾಮಾರಿ ಕರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಆರೋಪಿಸಿದರು.

    ಪಟ್ಟಣದ ತಾಲೂಕು ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು. ರಾಜ್ಯದಲ್ಲಿ ಕರೊನಾಕ್ಕೆ ಒಳಗಾದ ಕೂಲಿ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದ ಹಲವು ಸಾವಿಗೀಡಾಗುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಬರಬೇಕು. ಲಾಕ್‌ಡೌನ್ ಸಂದರ್ಭದಲ್ಲಿ ಬಿಪಿಎಲ್ ಪಡಿತರ ಚೀಟಿದಾರರು, ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರಿಗೆ ತಲಾ 10 ಕೆಜಿ ಅಕ್ಕಿ, 10 ಸಾವಿರ ರೂ. ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

    ಲಸಿಕೆ ನೀಡಿಕೆ ಕುರಿತು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರವನ್ನು ನಂಬಿದ ಜನರು ರೋಸಿ ಹೋಗಿದ್ದಾರೆ. ಆಡಳಿತ ನಡೆಸಲು ಆಗದಿದ್ದರೆ ಬೇರೆಯವರಿಗೆ ಬಿಟ್ಟುಕೊಡಿ ಎಂದರು. ಬಳ್ಳಾರಿಯ ಜಿಂದಾಲ್‌ನಲ್ಲಿ ಒಂದು ಸಾವಿರ ಬೆಡ್‌ಗಳನ್ನು ನಿರ್ಮಾಣ ಮಾಡುವತ್ತೇವೆ ಎಂದು ಹೇಳಿದ್ದಾರೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಜಿಲ್ಲೆಯಲ್ಲಿ ಸಾಕಷ್ಟು ಅನುದಾನವಿದೆ. ಅದನ್ನು ಸರ್ಕಾರ ಸದ್ಬಳಕೆ ಮಾಡಿಕೊಳ್ಳಲಿ ಎಂದು ಹೇಳಿದರು.

    ಲಸಿಕೆ ಹಾಕುವಲ್ಲಿ ಜಿಲ್ಲಾಡಳಿತ ಗೊಂದಲ ಉಂಟು ಮಾಡಿದೆ. ಆಯಾ ತಾಲೂಕಿನಲ್ಲೇ ಜನರಿಗೆ ಲಸಿಕೆ ಕೊಡುವ ವ್ಯವಸ್ಥೆಯಾಗಬೇಕು. ಎಸಿ ಜತೆ ಮಾತನಾಡಿ ಎಲ್ಲರಿಗೂ ಲಸಿಕೆ ಸಿಗುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ್ ಚಿದಾನಂದ, ಎಂ.ಪರಮೇಶ್ವರಪ್ಪ, ಪುರಸಭೆ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts