More

    ಈರುಳ್ಳಿಗೆ ಕೊಳೆ ರೋಗ: ಹೂವಿಹಡಗಲಿಯಲ್ಲಿ ಬೆಳೆ ನಾಶ ಮಾಡಲು ಮುಂದಾದ ರೈತರು

    ಹೂವಿನಹಡಗಲಿ: ತಾಲೂಕಿನಲ್ಲಿ ಬೆಳೆದ ಈರುಳ್ಳಿಗೆ ಕೊಳೆ ರೋಗ ಕಾಣಿಸಿಕೊಂಡಿದ್ದು, ಕೆಲ ರೈತರು ಬೆಳೆ ನಾಶಪಡಿಸಲು ಮುಂದಾಗಿದ್ದಾರೆ.

    ತಾಲೂಕಿನ 900 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆದಿದ್ದಾರೆ. ಆದರೆ, ಅತಿಯಾದ ಮಳೆಯಿಂದಾಗಿ ಕೊಳೆ ರೋಗ ಕಾಣಿಸಿಕೊಂಡಿದೆ. ಇಟ್ಟಿಗಿ, ಉತ್ತಂಗಿ, ತಳಕಲ್ಲು, ಮಹಾಜನದಹಳ್ಳಿ, ಕಲ್ಲಹಳ್ಳಿ, ಕೆಂಚಮ್ಮನಹಳ್ಳಿ, ಹೂವಿನಹಡಗಲಿ, ಹಿರೇಹಡಗಲಿ ಸೇರಿ ಇತರ ಭಾಗಗಳಲ್ಲಿ ಬೆಳೆದ ಈರುಳ್ಳಿ ಸಂಪೂರ್ಣ ಕೊಳೆ ರೋಗಕ್ಕೀಡಾಗಿದೆ. ಸಾಲಮಾಡಿ ಬೆಳೆದ ಬೆಳೆ ಕೈಗೆ ಸಿಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂಕಿನ ಉತ್ತಂಗಿ ಗ್ರಾಮದ ನೆಲ್ಕುದುರಿ ನಾಗೇಂದ್ರಪ್ಪ ಎರಡು ಎಕರೆಯಲ್ಲಿ ಬೆಳೆದ ಈರುಳ್ಳಿ ಬೆಳೆಯನ್ನು ಟ್ರಾೃಕ್ಟರ್ ಮೂಲಕ ನಾಶ ಮಾಡಿದ್ದಾರೆ.

    ತಾಲೂಕಿನಲ್ಲಿ ರೈತರು ಹೆಚ್ಚಾಗಿ ಈರುಳ್ಳಿ ಬೆಳೆದಿದ್ದಾರೆ. ಬೆಳೆಗೆ ಕೊಳೆ ರೋಗ ತಗುಲಿದೆ. ಕಳೆದ ಬಾರಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸೂಕ್ತ ಬೆಲೆ ಸಿಗಲಿಲ್ಲ. ಆದರೆ ಈ ಬಾರಿ ಬೆಳೆಗೆ ರೋಗ ಬಂದಿದ್ದರಿಂದ ರೈತರು ತೊಂದರೆಗೀಡಾಗಿದ್ದಾರೆ. ಸರ್ಕಾರ ಈರುಳ್ಳಿ ಬೆಳೆಗಾರರ ನೆರವಿಗೆ ಬರಬೇಕು. ಅವರು ಪಡೆದ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ಸಂಘದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ಈರುಳ್ಳಿ ಬೆಳೆಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಸಿದ್ದೇಶ ಎಚ್ಚರಿಸಿದ್ದಾರೆ.


    ಹವಾಮಾನದ ವೈಪರೀತ್ಯದಿಂದ ತಾಲೂಕಿನಲ್ಲಿ ಶೇ.30 ಈರುಳ್ಳಿ ಬೆಳೆಗೆ ಕೊಳೆ ರೋಗ ಬಂದಿದೆ. ವಿಜ್ಞಾನಿಗಳ ಜತೆಗೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಸಂರಕ್ಷಣೆ ಕುರಿತು ಸಲಹೆ ನೀಡಲಾಗುವುದು. ಹಾಳಾದ ಈರುಳ್ಳಿ ಬೆಳೆಯನ್ನು ಸಮೀಕ್ಷೆ ಮಾಡಿ ಸರ್ಕಾಕ್ಕೆ ವರದಿ ಕಳಿಸಲಾಗುವುದು.
    | ವಿಜಯ ನಿಚ್ಚಾಪುರ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ, ಹೂವಿನಹಡಗಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts