More

    ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಶಾಸಕ. ಪಿ.ಟಿ.ಪರಮೇಶ್ವರನಾಯ್ಕ ಸಲಹೆ

    ಹೂವಿನಹಡಗಲಿ: ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗ್ರಾಪಂ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಂದಾದಾಗ ಮಾತ್ರ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.

    ಪಟ್ಟಣದ ತಾಪಂ ರಾಜೀವ್‌ಗಾಂಧಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆಯಡಿ ಕ್ರಿಯಾಯೋಜನೆ ತಯಾರಿಸಲು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು.

    ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಯೋಜನೆ, ಶಿಶು ಅಭಿವೃದ್ಧಿ ಯೋಜನೆ, ಶೈಕ್ಷಣಿಕ ಅಭಿವೃದ್ಧಿ ಯೋಜನೆ, ವಿದ್ಯಾವಂತ ನಿರುದ್ಯೋಗಿಗಳಿಗೆ ಆಧುನಿಕ ತಂತ್ರಜ್ಞಾನ ತರಬೇತಿ ಜತೆಗೆ ವಿವಿಧ ಕಸೂತಿ ಕಲೆಗಳ ಟ್ರೈನಿಂಗ್ ನೀಡಿ ಗ್ರಾಮೀಣರ ಜೀವನ ಮಟ್ಟ ಸುಧಾರಣೆ ಮತ್ತು ಕೌಶಲಾಭಿವೃದ್ಧಿಗೆ ಶ್ರಮಿಸಬೇಕು ಎಂದರು.

    ಅಧಿಕಾರಿಗಳು ಗ್ರಾಮಸಭೆ ನಡೆಸಿ ಜನರಿಗೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸುವ ಜತೆಗೆ ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಬೇಕು. ಪಂಚಾಯಿತಿ ವ್ಯಾಪ್ತಿಯ ಪ್ರತಿ ಹಳ್ಳಿಗೂ ಮೂಲ ಸೌಕರ್ಯ ಒದಗಿಸುವ ಕೆಲಸವಾಗಬೇಕು ಎಂದರು.

    ಕಾರ್ಯಕ್ರಮದಲ್ಲಿ ತಾಪಂ ಇಒ ಎಸ್.ಎಸ್.ಪ್ರಕಾಶ್, ಪುರಸಭೆ ಅಧ್ಯಕ್ಷ ಜ್ಯೋತಿ ಮಲ್ಲಣ್ಣ, ತಾಲೂಕಿನ ವಿವಿಧ ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts