ಹೂವಿನಹಡಗಲಿ: ತೊಗರಿ ಖರೀದಿ ಕೇಂದ್ರ ಆರಂಭಿಸಿದ್ದು, ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಕೆ.ರಾಘವೇಂದ್ರರಾವ್ ಹೇಳಿದರು.
ಪಟ್ಟಣದ ಟಿಎಪಿಸಿಎಂಎಸ್ ಕಚೇರಿಯಲ್ಲಿ ಶುಕ್ರವಾರ ತೊಗರಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.ತಾಲೂಕಿನ ತೊಗರಿ ಬೆಳೆದ ರೈತರು ಖರೀದಿ ಕೇಂದ್ರದಲ್ಲಿ ಹೆಸರು ನೋಂದಾಯಿಸಬೇಕು. ನಂತರ ಗುಣ ಮಟ್ಟದ ತೊಗರಿಯನ್ನು ಕೇಂದ್ರಕ್ಕೆ ಕೊಡಬೇಕು. ತಾಲೂಕಿನಲ್ಲಿ 3794 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದೆ. ಕೇಂದ್ರ ಸರ್ಕಾರದಿಂದ 5800 ರೂ. ರಾಜ್ಯ ಸರ್ಕಾರದಿಂದ 300 ಪ್ರೋತ್ಸಾಹ ಧನ ನೀಡಲಾಗುತ್ತದೆ. ಕ್ವಿಂಟಾಲ್‌ಗೆ 6,100 ರೂ. ಬೆಲೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಸಹಕಾರ ಸಂಘದ ಅಧ್ಯಕ್ಷ ಡಾಕ್ಯಾನಾಯ್ಕ, ವ್ಯವಸ್ಥಾಪಕ ಸೊಪ್ಪಿನ ವೀರಣ್ಣ, ಕೃಷಿ ಅಧಿಕಾರಿ ಶಿವಮೂರ್ತಿ ನಾಯ್ಕ, ಎಪಿಎಂಸಿ ವ್ಯವಸ್ಥಾಪಕ ಮಹಾಂತೇಶ ಪಾಟೀಲ್ ಇದ್ದರು.