ಹೂವಿನಹಡಗಲಿ: ಪಟ್ಟಣದ ಗ್ರಾಮ ದೇವತೆ ಜಾತ್ರೋತ್ಸವ ಮಂಗಳವಾರ ಸಂಪನ್ನಗೊಂಡಿತು. ಬೆಳಗ್ಗೆ ಊರಮ್ಮ ದೇವಿಗೆ ವಿವಿಧ ಚಿನ್ನಾಭರಣಗಳಿಂದ ಸಿಂಗರಿಸಲಾಗಿತ್ತು.
ಗ್ರಾಮದೇವತೆ ದೇವಸ್ಥಾನದ ಸಮಿತಿ ಸದಸ್ಯರು ಮತ್ತು ದೈವಸ್ಥರು ದೇವಿಗೆ ಧಾರ್ಮಿಕ ವಿಧಿವಿಧಾನಗಳ ಮೂಲಕ ವಿಶೇಷ ಪೂಜೆ ಸಲ್ಲಿಸಿ ಉಡಿತುಂಬಿದರು. ನಂತರ ಪುರಸಭೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ದೇವಿಗೆ ಪೂಜೆ ಸಲ್ಲಿಸಿ ಉಡಿತುಂಬಿದರು.
ಮಹಿಳೆಯರು ಸರದಿಯಲ್ಲಿ ನಿಂತು ದೇವಿ ದರ್ಶನ ಪಡೆದರು.ದೇವಿಗೆ ಬಿಡುವ ಪಟ್ಟದ ಕೋಣವನ್ನು ಪಟ್ಟಣದ ಪಿಂಜಾರ್ ಓಣಿಯಿಂದ ದೇವಸ್ಥಾನದವರೆಗೆ ಮೆರವಣಿಗೆ ಮಾಡಲಾಯಿತು. ಮಹಿಳೆಯರು ಕಳಸದೊಂದಿಗೆ ಪಾಲ್ಗೊಂಡಿದ್ದರು. 12 ಜೋಡೆತ್ತುಗಳ ಮೆರವಣಿಗೆ ನಡೆಸಲಾಯಿತು. ಸಿಪಿಐ ದೀಪಕ್ ಭೂಸರೆಡ್ಡಿ, ಪಿಎಸ್‌ಐ ವೆಂಕಟೇಶ ನಾಯಕ,ಪುರಸಭೆ ಮುಖ್ಯಾಧಿಕಾರಿ ಪಚ್ಚಿ ಮಲ್ಲೇಶ್ ಇತರರಿದ್ದರು.