ರಿಪೇರಿ ಮಾಡಿ ನೀರು ಹರಿಸಿ

Latest News

ಡೇರಿಯಿಂದ ಹಾಲು ನಿರಾಕರಣೆ, ರೈತರ ಪ್ರತಿಭಟನೆ

ಹಾರೋಹಳ್ಳಿ: ಇಪ್ಪತ್ತು ವರ್ಷದಿಂದ ಲೆಕ್ಕ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಆಗ್ರಾ ಗ್ರಾಮದ ಹಾಲು ಉತ್ಪಾದಕರು...

ರಾಜ್ಯಸಭೆ ಸ್ಥಾಯಿ ಭಾವ ಹೊಂದಿದೆ, ಇಲ್ಲಿ ವೈವಿಧ್ಯತೆಯೂ ಇದೆ: ಅನುಭವಿಗಳ ಮನೆಯ 250ನೇ ಅಧಿವೇಶನದಲ್ಲಿ ಪ್ರಧಾನಿ ಮಾತು

ನವದೆಹಲಿ: ರಾಜ್ಯಸಭೆಯು ಭಾರತದ ಒಕ್ಕೂಟ ವ್ಯವಸ್ಥೆಯ ಆತ್ಮ ಇದ್ದಂತೆ. ಲೋಕಸಭೆ ಯಾವುದೇ ವಿಷಯವನ್ನು ಬುಡಮಟ್ಟದಿಂದ ವಿಶ್ಲೇಷಿಸಬಲ್ಲದಾದರೂ, ರಾಜ್ಯಸಭೆ ಅದನ್ನು ದೂರದೃಷ್ಟಿ ಕೋನದಿಂದ ನೋಡಿ...

ಕಂಬಳದ ಕೋಣಕ್ಕೆ ಹುಟ್ಟುಹಬ್ಬದ ಸಂಭ್ರಮ

ಯಶೋಧರ ವಿ.ಬಂಗೇರ ಮೂಡುಬಿದಿರೆ: ಕಂಬಳದ ಕೋಣವೆಂದರೆ ಯಾಜಮಾನರಿಗೆ, ಅಭಿಮಾನಿಗಳಿಗೆ ಪ್ರೀತಿ. ಮೂಡುಕೊಣಾಜೆ ಸಮೀಪದ ಕೊಪ್ಪದೊಟ್ಟು ಕೋಣದ ಯಾಜಮಾನರು ಇದೀಗ ಮೂರನೇ ವರ್ಷವೂ ತಮ್ಮ ಪ್ರೀತಿಯ ಕೋಣದ ಹುಟ್ಟುಹಬ್ಬವನ್ನು...

ಹೊಸಕೋಟೆಯಲ್ಲಿ ಅಭ್ಯರ್ಥಿ ಎಂಟಿಬಿ ನಾಗರಾಜು ನಾಮಪತ್ರ ಸಲ್ಲಿಸುವ ವೇಳೆ ಎದೆಗೆ ಇರಿದುಕೊಂಡ ಅಭಿಮಾನಿ

ಹೊಸಕೋಟೆ: ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರು ನಾಮಪತ್ರ ಸಲ್ಲಿಸುವ ವೇಳೆ ಅವರ ಅಭಿಮಾನಿಯೊಬ್ಬ ಚಾಕುವಿನಿಂದ ಸಣ್ಣ ಪ್ರಮಾಣದಲ್ಲಿ ಎದೆಗೆ ಇರಿದುಕೊಂಡಿದ್ದಾನೆ. ತಹಸೀಲ್ದಾರ್​ ಕಚೇರಿಗೆ...

ಜನಸ್ಪಂದನ ಸಭೆಯಲ್ಲಿ ಅಹವಾಲುಗಳ ಮಹಾಪೂರ

ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳ ಮಹಾಪೂರವೇ ಹರಿದು ಬಂದಿತು. ರಸ್ತೆ, ಚರಂಡಿ ಸೇರಿದಂತೆ ಮೂಲಸೌಲಭ್ಯಕ್ಕೆ ಬೇಡಿಕೆ, ಉದ್ಯೋಗ, ಸಾಲ, ಪಿಂಚಣಿ,...

ಹೂವಿನಹಿಪ್ಪರಗಿ: ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಸಂಕನಾಳ ಗ್ರಾಮದ ರೈತರು ಸ್ಥಳೀಯ ಪತ್ರಿವನ ಮಠದಿಂದ ಬಂಡಿಗಳೊಂದಿಗೆ ಗುರುವಾರ ಪ್ರತಿಭಟನಾ ರ‍್ಯಾಲಿ ಆರಂಭಿಸಿ ಉಪ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆ ಮಾಡಿದರು.

ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜ.1 ರಂದು ರೈತರು ನಡೆಸಿದ ಧರಣಿ ಸಂದರ್ಭದಲ್ಲಿ ತಹಸೀಲ್ದಾರ್ ಹಾಗೂ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಧರಣಿ ಸ್ಥಳಕ್ಕೆ ಭೇಟಿ ನೀಡಿ 10 ದಿನದೊಳಗೆ ಕಾಲುವೆ ಕಾಮಗಾರಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ತುಂಬಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಡೀ ವಿಜಯಪುರ ಜಿಲ್ಲೆಗೆ ನೀರು ಹರಿಸುವ ಜಾಕ್ವೆಲ್ ಸಂಪೂರ್ಣ ಸುಟ್ಟಿದ್ದರೂ ಅಧಿಕಾರಿಗಳು ಸತ್ಯಾಂಶ ಮುಚ್ಚಿಟ್ಟು ಧರಣಿ ಸಂದರ್ಭದಲ್ಲಿ 10 ದಿನದೊಳಗೆ ನೀರು ಕೊಡುವುದಾಗಿ ನಂಬಿಸಿ ನೂರಾರು ರೈತರನ್ನು ಮೋಸಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

15 ದಿನಗಳಲ್ಲಿ ರಿಪೇರಿ ಅಥವಾ ಹೊಸ ಮಷಿನ್​ಗಳನ್ನು ಅಳವಡಿಸಿ ರೈತರಿಗೆ ನೀರು ಒದಗಿಸಲು ಸಾಧ್ಯವಿದೆ. ಆದರೆ ರೈತರಿಗೆ ಏನೂ ತಿಳಿಯುವುದಿಲ್ಲವೆಂಬ ಹುನ್ನಾರದಿಂದ ಬೇಕಂತಲೇ ರಿಪೇರಿಗೆ 4 ತಿಂಗಳು ಬೇಕೆಂದು ಹೇಳುತ್ತಿದ್ದಾರೆ. ರೈತರ ಬೇಡಿಕೆಗಳು ಈಡೇರದಿದ್ದರೆ ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಹಾಗೂ ಕೆಬಿಜೆಎನ್​ಎಲ್ ಅಧಿಕಾರಿಗಳಿಗೆ ಅಖಂಡ ಕರ್ನಾಟಕ ರೈತ ಸಂಘ ಪದಾಧಿಕಾರಿಗಳು ಹಾಗೂ ಸಮಸ್ತ ರೈತರು ಎಚ್ಚರಿಕೆ ನೀಡಿದರು.

ಧರಣಿ ಸ್ಥಳಕ್ಕೆ ಜಿಪಂ ಸದಸ್ಯ ಶಿವಾನಂದ ದೇಸಾಯಿ ಭೇಟಿ ನೀಡಿ ಮಾತನಾಡಿ, ಕೆರೆಗಳಿಗೆ ನೀರು ತುಂಬಿಸಲು ಸಂಬಂಧಿತ ಅಧಿಕಾರಿಗಳು, ಸಚಿವರು ಹಾಗೂ ಶಾಸಕರ ಗಮನಕ್ಕೆ ತಂದು ಆದಷ್ಟು ಬೇಗನೆ ಕೆರೆಗಳಿಗೆ ನೀರು ಹರಿಸುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ತಾಲೂಕಾಧ್ಯಕ್ಷ ಸಿದ್ದರಾಮ ಅಂಗಡಗೇರಿ, ತಾಲೂಕು ಗೌರವಾಧ್ಯಕ್ಷ ಈರಣ್ಣ ದೇವರಗುಡಿ, ಶಾಂತಗೌಡ ಬಿರಾದಾರ, ಹೂವಿನಹಿಪ್ಪರಗಿ ಘಟಕದ ಅಧ್ಯಕ್ಷ ಹನುಮಂತ ತೋಟದ, ಪವಾಡೆಪ್ಪ ಹಳೇಗೌಡರ, ಹನುಮಂತರಾಯ ಗುಣಕಿ, ಕೃಷ್ಣಪ್ಪ ಬಮರೆಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಗಿರೀಶ ಶಿವಯೋಗಿ, ಬಸಣ್ಣ ಪೂಜಾರಿ ಇತರರು ಇದ್ದರು.

- Advertisement -

Stay connected

278,580FansLike
571FollowersFollow
609,000SubscribersSubscribe

ವಿಡಿಯೋ ನ್ಯೂಸ್

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....