17.8 C
Bengaluru
Wednesday, January 22, 2020

ಹೈದರಾಬಾದ್​ ಪೊಲೀಸ್​ ಎನ್​ಕೌಂಟರ್​: ಘಟನೆ ಸಾಬೀತುಪಡಿಸುವುದು ಸವಾಲಿನ ಕೆಲಸ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಬೆಂಗಳೂರು: ಹೈದರಾಬಾದ್​ನಲ್ಲಿ ಪಶುವೈದ್ಯೆ ಅತ್ಯಾಚಾರ ಪ್ರಕರಣ ದಲ್ಲಿ ಎನ್​ಕೌಂಟರ್ ಮಾಡಿರುವ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ ಸಜ್ಜನರ್ ರಾತ್ರಿ ಬೆಳಗಾಗುವುದರಲ್ಲಿ ಪ್ರಸಿದ್ಧರಾಗಿದ್ದಾರೆ. ಆದರೆ ಇದನ್ನು ಅಸಲಿ ಎನ್​ಕೌಂಟರ್ ಎಂದು ಸಾಬೀತು ಪಡಿಸುವುದು ತೀರಾ ಸವಾಲಿನ ಕೆಲಸವಾಗಿದ್ದು, ಆ ಪರಿಸ್ಥಿತಿಯಲ್ಲಿ ಎನ್​ಕೌಂಟರ್ ಅನಿವಾರ್ಯವಾಗಿತ್ತು ಎಂದು ಅವರು ನಿರೂಪಿಸಬೇಕಾಗುತ್ತದೆ. ಆರೋಪಿಗಳು ತಪ್ಪಿಸಿಕೊಂಡು ಓಡುತ್ತಿದ್ದದ್ದು ಕೋರ್ಟ್​ನಲ್ಲಿ ಸಾಬೀತಾಗಬೇಕಾದರೆ ಅದಕ್ಕೆ ಪೂರಕ ಸನ್ನಿವೇಶ ಘಟನಾ ಸ್ಥಳದಲ್ಲಿರಬೇಕಾಗುತ್ತದೆ.

ಎನ್​ಕೌಂಟರ್​ಗೆ ಪೊಲೀಸರ ಹಿಂದೇಟು: ನಕಲಿ ಎನ್​ಕೌಂಟರ್​ಗಳನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸುತ್ತದೆ. ಇತ್ತೀಚೆಗೆ ಕೆಲ ನಕಲಿ ಎನ್​ಕೌಂಟರ್ ಸಾಬೀತಾಗಿ 7 ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 31 ವರ್ಷಗಳ ಹಿಂದೆ ಉ.ಪ್ರದ ಗೊಂಡಾದಲ್ಲಿ ನಡೆದ ಪ್ರಕರಣದ ಸಂಬಂಧ 8 ಪೊಲೀಸರಿಗೆ ಶಿಕ್ಷೆಯಾಗಿತ್ತು. ಡೆಹರಾಡೂನ್​ನಲ್ಲಿ 2009ರಲ್ಲಿ ನಡೆದ ನಕಲಿ ಎನ್​ಕೌಂಟರ್ ಪ್ರಕರಣದಲ್ಲಿ 17 ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ಕಾರಣದಿಂದಾಗಿ ಎಷ್ಟೇ ಒತ್ತಡವಿದ್ದರೂ ಪೊಲೀಸರು ಎನ್​ಕೌಂಟರ್ ಮಾಡಲು ಹಿಂದೇಟು ಹಾಕುತ್ತಾರೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಎನ್​ಕೌಂಟರ್ ತನಿಖೆಯ ಹಾದಿ

ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ಎನ್​ಕೌಂಟರ್ ಪ್ರಕರಣದ ಬಗ್ಗೆ ತೆಲಂಗಾಣದ ಉನ್ನತ ತನಿಖಾ ಸಂಸ್ಥೆಯಿಂದ ಮುಂದಿನ ತನಿಖೆ ನಡೆಸಬೇಕು. ಈ ತಂಡದಲ್ಲಿ ಮ್ಯಾಜಿಸ್ಟ್ರೇಟ್, ಸರ್ಕಾರಿ ವೈದ್ಯರು, ಮಾನವ ಹಕ್ಕುಗಳ ಆಯೋಗ, ಐಪಿಎಸ್ ದರ್ಜೆ ಅಧಿಕಾರಿ ಇರುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಬೇಕು. ಈ ದೃಶ್ಯಗಳನ್ನು ವಿಡಿಯೋ ರೆಕಾರ್ಡ್ ಮಾಡಬೇಕು. ಪ್ರಕರಣದ ತನಿಖಾಧಿಕಾರಿ ಮತ್ತು ಎನ್​ಕೌಂಟರ್ ನಡೆಸಿದ ಅಧಿಕಾರಿ, ಸ್ಥಳದಲ್ಲಿದ್ದ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗುತ್ತದೆ. ಎನ್​ಕೌಂಟರ್ ಅಸಲಿಯೋ ಅಥವಾ ನಕಲಿಯೋ ಎಂಬುದರ ಬಗ್ಗೆ ಐಪಿಎಸ್ ದರ್ಜೆ ಅಧಿಕಾರಿ ತನಿಖೆ ನಡೆಸಿ ಮ್ಯಾಜಿಸ್ಟ್ರೇಟ್​ಗೆ ವರದಿ ಸಲ್ಲಿಸಬೇಕು. ತನಿಖೆಯಲ್ಲಿ ನಕಲಿ ಎಂಬುದಕ್ಕೆ ಸಾಕ್ಷ್ಯ ಲಭ್ಯವಾದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಐಪಿಸಿ 302 ಕೊಲೆ ಪ್ರಕರಣ ದಾಖಲಿಸಲು ತನಿಖಾ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಲಿದೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...