

ಹೈದರಾಬಾದ್: ಗಂಡ-ಹೆಂಡತಿಯ ಸಂಬಂಧ ಸುಂದರವಾದ ಬಂಧವಾಗಿದೆ. ಆದರೆ ಈ ಸಂಬಂಧದಲ್ಲಿ ಕೊಂಚ ವ್ಯತ್ಯಾಸವಾದರು ಸಂಸಾರವೇ ಬಿದಿಗೆ ಬರುತ್ತದೆ. ಹೀಗೆ ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್ಬುಕ್ ಲೈವ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ. ಸನಾ ನನ್ನ ಗಂಡನಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್ಬುಕ್ ಲೈವ್ನಲ್ಲೇ ಆತ್ಮಹತ್ಯೆಮಾಡಿಕೊಂಡಿದ್ದಾರೆ.
ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್ ಎನ್ನುವವರನ್ನು ಪ್ರಿತಿಸಿ ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ವಿವಾಹದ ಬಳಿಕ ಹೇಮಂತ್ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್ಬುಕ್ ಲೈವ್ ನಲ್ಲೇ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ. ಸನಾ ಮನೆಯವರು ಆಕೆಯ ಆತ್ಮಹತ್ಯೆಗೆ ಹೇಮಂತ್ ಕಾರಣ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.