18 C
Bangalore
Friday, December 6, 2019

ಬುರ್ಖಾ ನಿಷೇಧಿಸುವುದರಿಂದ ಖಂಡಿತ ಭಯೋತ್ಪಾದನೆ ನಿಲ್ಲುವುದಿಲ್ಲ, ಆದರೆ…: ಲೇಖಕಿ ತಸ್ಲಿಮಾ ನಸ್ರೀನ್​ ಟ್ವೀಟ್

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ನವದೆಹಲಿ: ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ದಾಳಿಯ ನಂತರ ಅಲ್ಲಿ ಭದ್ರತಾ ದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಏ. 29ರಿಂದ ಬುರ್ಖಾವನ್ನೂ ನಿಷೇಧಿಸಲಾಗಿದೆ. ದೇಶದ ಸುರಕ್ಷತೆಯಿಂದ ಇದೊಂದು ಅತ್ಯುತ್ತಮ ಕ್ರಮ ಎಂದು ಬಾಂಗ್ಲಾ ಮೂಲದ ತಸ್ಲಿಮಾ ನಸ್ರೀನ್​ ಟ್ವೀಟ್​ ಮಾಡಿದ್ದರು.

ಶ್ರೀಲಂಕಾದಲ್ಲಿ ಬುರ್ಖಾ ನಿಷೇಧವಾದ ಬಳಿಕ ಈಗ ಮತ್ತೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ. ಹಲವು ಜನರು ಒಳ್ಳೆಯ ನಿರ್ಧಾರ ಎಂದಿದ್ದರೆ ಮತ್ತೊಂದಷ್ಟು ಜನ, ಬುರ್ಖಾ ನಿಷೇಧ ಮಾಡುವುದರಿಂದ ಭಯೋತ್ಪಾದನೆ ನಿಯಂತ್ರಣವಾಗುವುದಿಲ್ಲ. ಬದಲಿಗೆ ಧಾರ್ಮಿಕ ಭಾವನೆಗೆ ಧಕ್ಕೆ ತಂದಂತೆ ಆಗುತ್ತದೆ ಎಂದು ಆರೋಪಿಸುತ್ತಿದ್ದಾರೆ.

ಈಗ ಮತ್ತೆ ತಸ್ಲಿಮಾ ನಸ್ರೀನ್​ ಬುರ್ಖಾ ನಿಷೇಧ ಬೆಂಬಲಿಸಿ ಟ್ವೀಟ್​ ಮಾಡಿದ್ದು, ಬುರ್ಖಾ ನಿಷೇಧದಿಂದ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಂಡಂತೆ ಆಗುತ್ತದೆ ಎಂದು ತುಂಬ ಜನರು ಹೇಳುತ್ತಿದ್ದಾರೆ. ನಂತರ ಹತ್ಯೆ ಮಾಡುವುದನ್ನು ನಿಷೇಧಿಸಿದರೆ ಇಂತಹವರು ಅದನ್ನೂ ಧಾರ್ಮಿಕ ಸ್ವಾತಂತ್ರ್ಯ ಹರಣ ಎನ್ನುತ್ತಾರೆ. ಯಾರಿಗೆ ಇಸ್ಲಾಂನಲ್ಲಿ ನಂಬಿಕೆಯಿಲ್ಲವೋ ಅವರ ವಿರುದ್ಧ ಹೋರಾಡಿ ಎಂದು ಪವಿತ್ರ ಖುರಾನ್​ ತನ್ನಲ್ಲಿ ನಂಬಿಕೆ ಇರುವವರ ಬಳಿ ಕೇಳಿಕೊಳ್ಳುತ್ತದೆ. ಆದರೆ ಇನ್ನೊಬ್ಬರಿಗೆ ಹಾನಿ ಮಾಡಿ ತಮ್ಮ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಅನುಭವಿಸುವ ಮನಸ್ಥಿತಿಯನ್ನು ಯಾರೂ ಹೊಂದಬಾರದು ಎಂದು ಹೇಳಿದ್ದಾರೆ.

ಅಲ್ಲದೆ, ಬುರ್ಖಾ ನಿಷೇಧಿಸುವುದರಿಂದ ಭಯೋತ್ಪಾದನೆ ನಿಲ್ಲುವುದಿಲ್ಲ ಎಂಬುದನ್ನು ನಾನೂ ಒಪ್ಪಿಕೊಳ್ಳುತ್ತೇನೆ. ಆದರೆ ಖಂಡಿತ ಮಹಿಳೆಯರು ಮುಖವಿಲ್ಲದೆ ಬದುಕುವುದನ್ನು ತಡೆಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಪವಿತ್ರ ಪುಸ್ತಕಗಳಲ್ಲಿ ಹೇಳಿದಂತೆ ನಾವು ಹಿಂಸಾಚಾರವನ್ನು ಖಂಡಿಸೋಣ. ದೇವರ ಹೆಸರಲ್ಲಿ ನಡೆಯುವ ಹತ್ಯೆಯನ್ನು ಒಪ್ಪಿಕೊಳ್ಳಲೇಬಾರದು. ಮಾನವ ಜೀವನದ ಪಾವಿತ್ರ್ಯತೆಯಲ್ಲಿ ನಂಬಿಕೆಯಿಡಬೇಕು ಎಂದಿದ್ದಾರೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...