More

    ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ: ಕೋಲಾರ ಸಂಸದ ಮುನಿಸ್ವಾಮಿ

    ನವದೆಹಲಿ: ಜೆಡಿಎಸ್-ಬಿಜೆಪಿ ದೋಸ್ತಿಗಳಿಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಇದರಿಂದಾಗಿ ಹಾಲಿ ಸಂಸದ ಎಸ್ ಮುನಿಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ ಸ್ಪಷ್ಟಪಡಿಸಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್​​ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ: ಬಿಜೆಪಿ-ದಳ​ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ 

    ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿ ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಈ ಸಂಬಂಧ ಶನಿವಾರ ಅರಮನೆ ಮೈದಾನದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಘೋಷಣೆ ಮಾಡಿದ್ದಾರೆ.

    ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ನಾಯಕರು ಪಕ್ಷಕ್ಕೆ ತ್ಯಾಗ ಮಾಡಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಮಂತ್ರಿ ಆಗಬೇಕು. ಹೀಗಾಗಿ ದಳದ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲಾಗಿದೆ. ಕೋಲಾರದ ಸದ್ಯದ ಪರಿಸ್ಥಿತಿಯನ್ನು ಮಾಜಿ ಪ್ರಧಾನಿ ದೇವೇಗೌಡರಿಗೆ ವಿವರಿಸಿದ್ದೇನೆ. ಜೆಡಿಎಸ್ ಅಭ್ಯರ್ಥಿಗಿಂತ ಹೆಚ್ಚು ಪ್ರಚಾರ ನಾನು ಮಾಡುತ್ತೇನೆ ಎಂದು ಹಾಲಿ ಸಂಸದ ಮುನಿಸ್ವಾಮಿ ಹೇಳಿದರು.

    ಬಿಜೆಪಿ-ದಳ ಮೈತ್ರಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಈಗಾಗಲೇ ಬಿಜೆಪಿ ಹೈಕಮಾಂಡ್ ಎರಡು ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಆದರೆ, ನಾಲ್ಕೈದು ಕ್ಷೇತ್ರಗಳನ್ನು ಕೇಳಿದ್ದರೂ ಕೇವಲ ಎರಡು ಕೊಟ್ಟರೆ ಹೇಗೆ ಎಂದು ಜೆಡಿಎಸ್ ಅಸಮಾಧಾನ ಹೊರಹಾಕಿದ್ದು, ಕೋಲಾರ ಕ್ಷೇತ್ರವನ್ನಾದರೂ ಕೊಡಿ ಎಂದು ಬೇಡಿಕೆ ಇಟ್ಟಿತ್ತು.
    ಕೋಲಾರ ಸೀಟು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈ ಮೂಲಕ ಜೆಡಿಎಸ್‍ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

    ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ತೀನಿ, ಪ್ರಧಾನಿ ಮೋದಿಗಾಗಿ ಕೆಲಸ ಮಾಡಿ. ಮೂರು ಕ್ಷೇತ್ರದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ರೂ ಬಿಟ್ಟುಬಿಡಿ ಎಂದು ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಮನವಿ ಮಾಡಿಕೊಂಡಿದ್ದಾರೆ.

    ಜೆಡಿಎಸ್ ಜೊತೆ ಮೈತ್ರಿಯಿಂದ ನಿಮಗೆ ಟಿಕೆಟ್ ಕೈತಪ್ಪಿದೆ ಎಂದು ನಡ್ಡಾ ಅವರು ಮುನಿಸ್ವಾಮಿಗೆ ಸ್ಪಷ್ಟವಾಗಿ ಹೇಳಿದ್ದು, ಸೂಕ್ತ ಸಮಯದಲ್ಲಿ ಪಕ್ಷ ನಿಮಗೆ ಸ್ಥಾನಮಾನ ನೀಡಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭರವಸೆ ನೀಡಿದ್ದಾರೆ ಎಂದು ಮುನಿಸ್ವಾಮಿ ಹೇಳಿದ್ದಾರೆ.

    ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ: ಸಾವಿನ ಸಂಖ್ಯೆ 115ಕ್ಕೆ ಏರಿಕೆ, 11 ದಾಳಿಕೋರರ ಬಂಧನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts